ಆರೋಗ್ಯ

ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಸಿಇಟಿಗೆ ಪ್ರತ್ಯೇಕ ವ್ಯವಸ್ಥೆಗೆ ನೊಂದಾಯಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಜುಲೈ 30 ಮತ್ತು 31 ರಂದು ನಡೆಯುವ ಸಿ.ಇ.ಟಿ ಪರೀಕ್ಷೆಗೆ ಹಾಜರಾಗುವ, ಕೋವಿಡ್-19 ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಪ್ರತ್ಯೇಕ ವ್ಯವಸ್ಥೆ ಮಾಡುತ್ತಿದ್ದು, ಅಂತಹ ವಿದ್ಯಾರ್ಥಿಗಳು https://ddpuudupi.blogspot.com ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಕೋವಿಡ್ ಪಾಸಿಟಿವ್ ಇದ್ದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ , ಪ್ರಸ್ತುತ ಪಾಸಿಟಿವ್ ಇರುವ ವಿದ್ಯಾರ್ಥಿಗಳು ಪರೀಕ್ಷೆಯ ದಿನಾಂಕದೊಳಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲು ಸಾದ್ಯವಾಗದಿದ್ದಲ್ಲಿ , ಅಂತಹ ವಿದ್ಯಾರ್ಥಿಗಳಿಗೆ ಅವರು ಇರುವ ಕೋವಿಡ್ ಕೇರ್ ಸೆಂಟರ್ ನಲ್ಲಿಯೇ ಪ್ರತ್ಯೇಕ ಕೊಠಡಿ ಸೌಲಭ್ಯದೊಂದಿಗೆ ಸಿಸಿಟಿವಿ ಅಳವಡಿಸಿ, ವೈದ್ಯರ ಮೂಲಕ ಪ್ರಶ್ನೆ ಪತ್ರಿಕೆ ವಿತರಿಸಿ , ಪರೀಕ್ಷೆಯ ಎಲ್ಲಾ ನಿಯಮಗಳನ್ನು ಅನುಸರಿಸಿ , ಪರೀಕ್ಷೆ ಬರೆಯಲು ಅವಕಾಶ ಒದಗಿಸಿದ್ದು, ಈ ವ್ಯವಸ್ಥೆ ಜಿಲ್ಲೆಯಲ್ಲಿ ಪ್ರಥಮ ಪ್ರಯತ್ನವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಪಾಸಿಟಿವ್ ಇರುವ ವಿದ್ಯಾರ್ಥಿಗಳು ಅಥವಾ ಅವರ ಪೋಷಕರು ಮೇಲ್ಕಂಡ ಬ್ಲಾಗ್ ನಲ್ಲಿ ತಮ್ಮ ವಿವರಗಳನ್ನು ದಾಖಲಿಸಿ ಈ ಸೌಲಭ್ಯದ ಪ್ರಯೋಜನ ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ದೂ.ಸಂ. 0820-2575891 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸಿಇಟಿ ಪರೀಕ್ಷೆಗೆ ಹಾಜರಾಗಲು , ಗ್ರಾಮೀಣ ಪ್ರದೇಶದಿಂದ ಬಸ್ ಸೌಲಭ್ಯವಿಲ್ಲದೇ, ಅನಾನುಕೂಲ ಇರುವ ವಿದ್ಯಾರ್ಥಿಗಳು , ತಮ್ಮ ದೂರವಾಣಿ ಸಂಖ್ಯೆ ಮತ್ತು ವಿವರಗಳನ್ನು ಉಡುಪಿಯ ಪಿಯು ಇಲಾಖೆಯ ಈ ಮೇಲ್ ವಿಳಾಸ ddsu.pue@gmail.com ಮತ್ತು ದೂ.ಸಂ. 0820-2575891 ಗೆ ಸಲ್ಲಿಸಿದ್ದಲ್ಲಿ , ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

Comments are closed.