ಉಡುಪಿ: ಶನಿವಾರದಂದು ಉಡುಪಿ ಜಿಲ್ಲೆಯಲ್ಲಿ 182 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 3218ಕ್ಕೆ ಏರಿಕೆಯಾಗಿದೆ.
ಶನಿವಾರ ಕುಂದಾಪುರ 37, ಉಡುಪಿಯ 96, ಕಾರ್ಕಳದ 49 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಸೋಂಕಿತರಲ್ಲಿ 109 ಮಂದಿ ಪುರುಷರು, 68 ಮಂದಿ ಮಹಿಳೆಯರು ಹಾಗೂ ಇಬ್ಬರು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣು ಮಕ್ಕಳು ಸೇರಿದ್ದಾರೆ.
ಶನಿವಾರ 79 ಮಂದಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದು 539 ಮಂದಿ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮೂರು ಸಾವಿರದ ಗಡಿ ದಾಟಿದ್ದು, ಗುಣಮುಖರಾದವರ ಸಂಖ್ಯೆಯು ಏರಿಕೆಯಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ 1199 ಸಕ್ರೀಯ ಪ್ರಕರಣಗಳಿದೆ.
Comments are closed.