ಉಡುಪಿ: ಉಡುಪಿ ಜಿಲ್ಲೆಯ ಎಲ್ಲಾ ಶಾಪಿಂಗ್ ಮಾಲ್, ರೆಸ್ಟೋರೆಂಟ್, ಶಾಪಿಂಗ್ ಕಾಂಪ್ಲೆಕ್ಸ್ ಸಿಬ್ಬಂದಿಗಳಿಗೆ ಕೊರೊನಾ ತಪಾಸಣೆಗಾಗಿ ಕಡ್ಡಾಯ ರ್‍ಯಾಂಡಮ್ ಟೆಸ್ಟ್ ನಡೆಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ.

ಜಿಲ್ಲೆಯ ಎಲ್ಲಾ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್, ಹೋಟೇಲ್, ರೆಸ್ಟೋರೆಂಟ್ ಮುಖ್ಯಸ್ಥರಿಗೆ ಈ ಹಿಂದೆಯೇ ಡಿಸಿ ಆದೇಶ ನೀಡಿದ್ದರೂ ಕೂಡ ಬಹುತೇಕರು ತಪಾಸಣೆ ನಡೆಸಿಲ್ಲ. ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಈವರೆಗೂ ತಪಾಸಣೆ ನಡೆಸದವರು ರ್‍ಯಾಂಡಮ್ ಟೆಸ್ಟ್ ನಡೆಸುವಂತೆ ಆದೇಶಿಸಿದ್ದಾರೆ. ಝೋಮ್ಯಾಟೊ, ಸ್ವಿಗ್ಗಿ ಹಾಗೂ ಇತರ ಆಹಾರ ವಿತರಕ ಸಂಸ್ಥೆಯ ಸಿಬ್ಬಂದಿಗಳು ಕೂಡ ಕಡ್ಡಾಯ ತಪಾಸಣೆ ನಡೆಸಬೇಕಾಗಿದೆ.
ಆಯಾಯ ತಾಲ್ಲೂಕು ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆ ನಡೆಸಬೇಕು. ರ್‍ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್ ಮೂಲಕ ಅವರೆಲ್ಲರ ತಪಾಸಣೆ ನಡೆಸಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ.
Comments are closed.