ಆರೋಗ್ಯ

ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೂ ಕರೋನಾ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ದಾಖಲು

Pinterest LinkedIn Tumblr
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೋಮವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.
ಈ ಬಗ್ಗೆ ಖುದ್ದು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ‘ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ’ಎಂದು ಬರೆದುಕೊಂಡಿದ್ದಾರೆ.
ಇನ್ನು ಸಿದ್ಧರಾಮಯ್ಯ ಪುತ್ರ ಡಾ. ಯತೀಂದ್ರ ಟ್ವೀಟ್ ಮಾಡಿ, ‘ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೋನಾ ಆಂಟಿಜನ್ ಟೆಸ್ಟ್ ಮಾಡಲಾಗಿ ಅವರಿಗೆ ಕೊರೋನ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರೆಂಟೈನ್ ಆಗಬೇಕೆಂದು ಕೇಳಿಕೊಳ್ಳುತ್ತೇನೆ’ ಎಂದು ಬರದುಕೊಂಡಿದ್ದಾರೆ.
ಭಾನುವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರಿಗೂ ಕೊರೋನಾ ಸೋಂಕು ದೃಢವಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಮಾಜಿ ಸಿಎಂ ಸಿದ್ಧರಾಮಯ್ಯ ಕೂಡ ಅದೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

Comments are closed.