ಆರೋಗ್ಯ

ಕಾರಿನಲ್ಲಿ ಒಬ್ಬರೇ ಹೋಗುವಾಗ ಮಾಸ್ಕ್ ಧರಿಸುವ ಅಗತ್ಯ ಇಲ್ಲ: ಕೇಂದ್ರ ಸರಕಾರ ಸ್ಪಷ್ಟನೆ

Pinterest LinkedIn Tumblr

ನವದೆಹಲಿ: ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವ ವೇಳೆ ಮಾಸ್ಕ್ ಧರಿಸಬೇಕೆಂಬ ಯಾವುದೇ ಸಲಹೆ ಬಂದಿಲ್ಲ. ಆದ್ದರಿಂದ ಒಬ್ಬರೇ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಮಾಸ್ಕ್ ಧರಿಸದಿರುವುದು ನಿಯಮಗಳ ಉಲ್ಲಂಘನೆ ಅಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

ಕೋವಿಡ್ ನಿರ್ವಹಣೆ ಕುರಿತು ಪ್ರತಿಕಾಗೋಷ್ಠಿಯಲ್ಲಿ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಈ ಕುರಿತು ಮಾಹಿತಿ ನೀಡಿದ್ದು ಗುಂಪಿನಲ್ಲಿ ವ್ಯಾಯಾಮ ಮಾಡುವವರು ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಬೇಕು. ಆದರೆ ವಾಹನದ ಒಳಗೆ ಒಬ್ಬರೇ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹಾಗೂ ಒಬ್ಬರೇ ಸೈಕಲ್ ತುಳಿಯುದ್ದರೆ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದಿದ್ದಾರೆ.

(ಸಾಂದರ್ಭಿಕ ಚಿತ್ರಗಳು)

ದೆಹಲಿಯಲ್ಲಿ ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸ್ ದಂಡ ವಿಧಿಸುತ್ತಿದ್ದ ಬಗ್ಗೆ ವರದಿಯಾಗಿತ್ತು. ಆದರೆ ಸರ್ಕಾರದಿಂದ ಈ ಕುರಿತು ಯಾವುದೇ ನಿರ್ದೇಶನ ಆಗಿರಲಿಲ್ಲ. ಈ ಕೇಳಿ ಬಂದ ದೂರುಗಳ ಹಿನ್ನೆಲೆಯಲ್ಲಿ ಸಚಿವಾಲಯ ಸ್ಪಷ್ಟನೆ ನೀಡಿದೆ.

Comments are closed.