ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ಗುಣಮುಖರಾದ ಬಳಿಕ ಎರಡನೇ ಬಾರಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

55 ವರ್ಷದ ಅಮಿತ್ ಶಾ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರದಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ.
ಕೋವಿಡ್ ಸೋಂಕು ತಗುಲಿದ ಹಿನ್ನಲೆಯಲ್ಲಿ ಅಮಿತ್ ಶಾ ದೆಹಲಿಯ ಖಾಸಗಿ ಆಸ್ಪತ್ರೆಗೆ ಆಗಸ್ಟ್ 2ರಂದು ದಾಖಲಾಗಿದ್ದರು. ಆಗಸ್ಟ್ 14ರಂದು ತಾವು ಗುಣಮುಖರಾಗಿದ್ದು, ಹೋಂ ಐಸೋಲೇಷನ್‌ನಲ್ಲಿ ಕೆಲವು ದಿನ ಇರುವುದಾಗಿ ಅವರು ಟ್ವೀಟ್ ಮಾಡಿದ್ದರು.
ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಮುಖ ಸಭೆಗಳಲ್ಲಿ ಮಾತ್ರ ಅಮಿತ್ ಶಾ ಪಾಲ್ಘೊಂಡಿದ್ದರು. ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಅಮಿತ್ ಶಾ ಅವರನ್ನು ಪುನಃ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Comments are closed.