ಆರೋಗ್ಯ

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಹಾಕದಿದ್ದರೆ 1 ಸಾವಿರ ದಂಡ..!?

Pinterest LinkedIn Tumblr

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸದವರಿಗೆ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1 ಸಾವಿರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ಸರ್ಕಾರ ನಿರ್ಧರಿಸಿದ್ದು ಗುರುವಾರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಪೂರ್ತಿಯಾಗಿ ಮಾಸ್ಕ್ ಧರಿಸದವರಿಗೂ ದಂಡ ವಿಧಿಸಲಾಗುತ್ತದೆ. ಇತ್ತೀಚಿನ‌ ದಿನಗಳಲ್ಲಿ ಮಾಸ್ಕ್‌ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆ ಹೆಚ್ಚಾಗಿದ್ದು ದಂಡವನ್ನು ಹೆಚ್ಚಿಸಲಾಗುತ್ತದೆ. ಆಯಾ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗುರಿ ನಿಗದಿ ಮಾಡಿ, ದಂಡ ವಸೂಲು ಮಾಡಲಾಗುವುದು ಎಂದು ಹೇಳಿದರು.ಮಾಸ್ಕ್ ಇಲ್ಲದವರಿಗೆ ಬಸ್ ಒಳಗೆ ಪ್ರವೇಶ ನೀಡದಂತೆ ನಿರ್ವಾಹಕರಿಗೆ ಸೂಚಿಸಲಾಗುವುದು ಎಂದು ಹೇಳಿದರು.

 

Comments are closed.