ಬೆಂಗಳೂರು: ರಾಜ್ಯದ ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಶ್ರೀಮಂತ ಪಾಟೀಲ್, ನಾನು ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಕಳೆದ ಎರಡು ಮೂರು ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ, ನಿಮ್ಮ ಸೇವೆಗೆ ಮರಳುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಗುರುವಾರ ಕೊರೋನಾ ಸಂಖ್ಯೆ ಹತ್ತು ಸಾವಿರಕ್ಕೂ ಅಧಿಕವಾಗಿತ್ತು. ರಾಜ್ಯದಲ್ಲೆಡೆ ಕೊರೋನಾ ಸೋಂಕು ಹೆಚ್ಚುತ್ತಿದ್ದು ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.
Comments are closed.