ಆರೋಗ್ಯ

ಸರ್ಪ ಸುತ್ತು ಎಂಬುದು ಸರ್ಪಗಳ ದೋಷದಿಂದ ಬರುವುದೇ ಅಥಾವ ಬೇರೆ ವೈಜ್ಞಾನಿಕ ಕಾರಣವಿದೆಯೇ..?

Pinterest LinkedIn Tumblr

ಉಷ್ಣಕಾಲದಲ್ಲಿ ವೈರಸ್‌ಗಳಿಂದ ಬಾಧಿಸುವ ಸಮಸ್ಯೆ ಇದು. ದೇಹದ ರೋಗನಿರೋಧಕ ಶಕ್ತಿ ಕಡಿಮೆ ಇರುವಾಗ, ಈ ರೋಗದ ವೈರಾಣು ದೇಹ ಪ್ರವೇಶಿಸಬಹುದು. ಮೊದಲೇ ದೇಹಸ್ಥಿತ ರೋಗಾಣುಗಳ ಪ್ರಭಾವಕ್ಕೆ ಒಳಗಾಗಿದ್ದರೂ ಸರ್ಪಸುತ್ತು ಕಂಡು ಬರುತ್ತದೆ

ತ್ವಚೆ ಮೇಲೆ ಕೆಂಪನೆ ಚಿಕ್ಕಚಿಕ್ಕ ನೀರ್ಗುಳ್ಳೆಗಳು ಪಟ್ಟೆಯಾಕಾರದಲ್ಲಿ ದೇಹದ ಒಂದು ಪಾರ್ಶ್ವದಲ್ಲಿ ಕಂಡುಬರುತ್ತವೆ. ಈ ನೀರ್ಗುಳ್ಳೆಗಳು ನರತಂತುಗಳನ್ನು ಬಾಧಿಸುವುದರಿಂದ ಉರಿ, ನವೆ ಊಂಟಾಗುತ್ತವೆ. ನರತಂತುಗಳ ಜಾಲಗಳಲ್ಲಿ ಇವು ಪಸರಿಸುತ್ತವೆ. ಇದನ್ನು ಜನಸಾಮಾನ್ಯರು ಸರ್ಪದ ಚರ್ಮ ಅಥವಾ ಹೆಡೆಯ ರೂಪವನ್ನು ಕಲ್ಪಿಸಿಕೊಂಡು, ಸರ್ಪ ದೋಷದಿಂದ ಬರುವ ಸಮಸ್ಯೆ ಎಂದು ಪರಿಗಣಿಸುತ್ತಾರೆ, ಸರ್ಪದ ಬಗ್ಗೆ ಇರುವ ಸಹಜ ಭಯ ಮತ್ತು ದೇವತಾರೂಪಿ ನಂಬಿಕೆಯಿಂದ ದೇವರು ಮುನಿದ ಎಂಬ ಆತಂಕದ ಛಾಯೆ ಆವರಿಸುವುದೂ ಉಂಟು. ಇದಕ್ಕಾಗಿ ಸರ್ಪದೋಷ ಪರಿಹಾರ ಅಥವಾ ರೋಗ ವಾಸಿ ಮಾಡುವ ಅವೈಜ್ಞಾನಿಕ ವಿಧಾನಗಳನ್ನು ಅನುಸರಿಸುತ್ತಾರೆ. ಇದರಿಂದ ಕಾಯಿಲೆ ವಾಸಿಯಾಗುವುದರ ಬದಲು, ಉಪದ್ರವ ಜಾಸ್ತಿಯಾಗುತ್ತದೆ.

ಸರ್ಪ ಸುತ್ತು ಬರುವುದ್ಯಾಕೆ..?
ಸಾಮಾನ್ಯವಾಗಿ ಪಿತ್ತ ವಿಕೃತಿಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗುತ್ತದೆ. ರೋಗ ಬಾಧಿತ ವ್ಯಕ್ತಿಗಳ ನೇರ ಸಂಪರ್ಕದಿಂದ ಬರಬಹುದು. ಹಿಂದೆಂದೋ ಕಾಡಿದ ಕ್ಯಾನ್ಸರ್, ಸಿಡುಬಿನಂಥ ಸಮಸ್ಯೆಗಳು ಪೂರ್ತಿ ಗುಣವಾಗದೇ ಇದ್ದವರಲ್ಲೂ ಸರ್ಪಸುತ್ತು ಬಾಧಿಸುವುದಿದೆ. ಬಾಧಿತ ವ್ಯಕ್ತಿಗಳೊಂದಿಗಿನ ಲೈಂಗಿಕ ಸಂಪರ್ಕದಿಂದಲೂ ಹರಡುತ್ತದೆ. ಪ್ರಸವ ಕಾಲದಲ್ಲಿ ತಾಯಿಯು ಜನನಾಂಗದ ಸರ್ಪಸುತ್ತಿನಿಂದ ಬಳಲುತಿದ್ದರೆ, ನವಜಾತ ಶಿಶು ತೀರ್ವತರದ ಸರ್ಪಸುತ್ತಿಂದ ಬಳಲುತ್ತದೆ.

ಆಯುರ್ವೇದದಲ್ಲಿ ಅತ್ಯುತ್ತಮ ಚಿಕಿತ್ಸೆ ಇದೆ. ಹಳೆ ಅಕ್ಕಿ ಗಂಜಿ, ಬೇಯಿಸಿದ ಹೆಸರು ನೀರು, ಕೊತ್ತಂಬರಿ ಹಿಮ, ಎಳನೀರು ಸೇವಿಸಬೇಕು. ಇದರ ಜತೆಗೆ ಕೆಲವು ಔಷಧೋಪಚಾರ ಕೂಡ ಅಗತ್ಯ.

ಗರಿಕೆ ಹುಲ್ಲನ್ನು ಬೇರು ಸಮೇತ ಕಿತ್ತು ಚೆನ್ನಾಗಿ ನೀರಿನಲ್ಲಿ ತೊಳೆದು ಪೇಸ್ಟ್ ಮಾಡಿ ಸರ್ಪ ಸುತ್ತು ಆದ ಜಾಗಕ್ಕೆಲ್ಲಾ ಹಚ್ಚುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಹಾಗೆ ಗೋಟು ಅಡಿಕೆಯನ್ನ ಅಕ್ಕಿ ತೊಳೆದ ನೀರಿನಲ್ಲಿ ಅರೆದು ಶರೀರದ ತುಂಬಾ, ದಿನಕ್ಕೆ ನಾಲ್ಕು ಬಾರಿ ಲೇಪಿಸುವುದರಿಂದ ಉತ್ತಮ ಪರಿಹಾರವನ್ನು ಪಡೆಯಬಹುದು.

Comments are closed.