ಆರೋಗ್ಯ

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಡ್ರೈ ರನ್’ಗೆ ಚಾಲನೆ ನೀಡಿದ ಡಿಸಿ ಜಿ. ಜಗದೀಶ್

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ 6 ಸರಕಾರಿ ಹಾಗೂ 2 ಖಾಸಗಿ ಸೇರಿದಂತೆ ಒಟ್ಟು 8 ಕೇಂದ್ರಗಳಲ್ಲಿ ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಗೆ ಶುಕ್ರವಾರ ಏಕಕಾಲದಲ್ಲಿ ಚಾಲನೆ ನೀಡಲಾಯಿತು.

ಉಡುಪಿಯ ಮಹಿಳಾ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ದೀಪ ಬೆಳಗಿಸುವುದರ ಮೂಲಕ ಡ್ರೈ ರನ್ ಗೆ ಚಾಲನೆ ನೀಡಿದರು. ಬಳಿಕ ಡ್ರೈ ರನ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲ ಹಂತದಲ್ಲಿ ಆರೋಗ್ಯ ಇಲಾಖೆಯವರಿಗೆ ವಾಕ್ಸಿನ್ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು 19562 ತಮ್ಮ ನೊಂದಾವಣೆ ಮಾಡಿಕೊಂಡಿದ್ದಾರೆ. ಎರಡನೇ ಹಂತದಲ್ಲಿ ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಹಾಗೂ ಮೂರನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತದೆ.ಜಿಲ್ಲೆಯ ಒಟ್ಟು 8 ಆರೋಗ್ಯ ಕೇಂದ್ರದಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಶುಕ್ರವಾರ ಒಟ್ಟು 25 ಮಂದಿ ಕೊರೋನಾ ವಾರಿಯರ್ಸ್ ಗಳಿಗೆ ಡ್ರೈರನ್ ವ್ಯಾಕ್ಸಿನ್ ಪ್ರಕಿಯೆ ನಡೆಯಲಿದೆ. ಪ್ರತಿ ಕೇಂದ್ರದಲ್ಲಿಯೂ ಮೂರು ವಿಭಾಗಗಳನ್ನು ಮಾಡಲಾಗಿದ್ದು. ಮೊದಲ ವಿಭಾಗದಲ್ಲಿ ಕೋವಿಡ್ ವಾರಿಯರ್ ಮಾಹಿತಿ ಪಡೆದು, ದಾಖಲೆ ಪರಿಶೀಲಿಸಲನೆ ಮಾಡಲಾಗುತ್ತದೆ. ಎರಡನೆಯ ವಿಭಾಗದಲ್ಲಿ ವ್ಯಾಕ್ಸಿನ್ ಹಾಕಲಾಗುತ್ತದೆ. ಮೂರನೇ ವಿಭಾಗದಲ್ಲಿ ವ್ಯಾಕ್ಸಿನ್ ಹಾಕಿಸಿಕೊಂಡವರನ್ನು ಅರ್ಧ ಗಂಟೆಗಳ ಕಾಲ ನಿಗಾದಲ್ಲಿರಸಲಾಗುತ್ತದೆ ಎಂದರು. ಸಾಮಾಜಿಕ ಜಾಲತಾಣದಲ್ಲಿ ಸುಮ್ಮನೆ ಚರ್ಚೆ ಮಾಡುವುದು ಸರಿಯಲ್ಲ. ಲಸಿಕೆ ಬಗ್ಗೆ ಯಾವುದೇ ಭಯ ಬೇಡ. ಲಸಿಕೆ ಕಾರ್ಯಕ್ರಮವನ್ನು ಚುನಾವಣಾ ಮಾದರಿಯಲ್ಲಿ ಎಲ್ಲಾ ಇಲಾಖಾಧಿಕಾರಿಗಳನ್ನು ಬಳಸಿಕೊಂಡು ಮಾಡಲಾಗುತ್ತದೆ‌. ಯಾವುದೇ ನಿರ್ದಿಷ್ಟ ಗುರಿಯಿಲ್ಲ. ಲಸಿಕೆ ಪೂರೈಕೆ ಆಧಾರದಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಈ ಕಾರ್ಯ ನಡೆಸಲಿದೆ ಎಂದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ, ಜಿಲ್ಲಾಸ್ಪತ್ರೆ ಸರ್ಜನ್ ಡಾ. ಮಧುಸೂಧನ ನಾಯಕ್ ಹಾಗೂ ಇತರರು ಉಪಸ್ಥಿತರಿದ್ದರು.

Comments are closed.