ಉಡುಪಿ: ಜಿಲ್ಲೆಯ ಫ್ರಂಟ್‌ಲೈನ್ ವರ್ಕರ್ಸ್ ಅವರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ತಾವು ಲಸಿಕೆ ಪಡೆಯುವುದರ ಮೂಲಕ ಫೆಬ್ರವರಿ 8 ರಂದು ಬೆಳಗ್ಗೆ 11 ಘಂಟೆಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್ ವೈ, ಪೌರಾಯುಕ್ತ ಆನಂದ ಕಲ್ಲೋಳಿಕರ್ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.