ಆರೋಗ್ಯ

ನಟ ರಾಘವೇಂದ್ರ ರಾಜಕುಮಾರ್ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಬೆಂಗಳೂರು: ಕನ್ನಡ ಚಿತ್ರರಂಗದ ನಟ ರಾಘವೇಂದ್ರ ರಾಜಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಬೆಂಗಳೂರು ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ರಾಘವೇಂದ್ರ ರಾಜಕುಮಾರ್ ಅವರನ್ನು ಸಂಜೆ 6 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಘವೇಂದ್ರ ರಾಜಕುಮಾರ್ ಅವರಿಗೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ. ನಾಳೆ ಬೆಳಗ್ಗೆ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿದೆ.

Comments are closed.