ಆರೋಗ್ಯ

ಕೊರೊನಾ ಎರಡನೇ ಅಲೆ ಹಿನ್ನೆಲೆ ಗಡಿ ಪ್ರದೇಶಗಳಲ್ಲಿ ನಿರ್ಬಂಧ: ಗೃಹ ಸಚಿವ ಬೊಮ್ಮಾಯಿ

Pinterest LinkedIn Tumblr

ಉಡುಪಿ: ಬೇರೆ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ಮತ್ತು ಎರಡನೇ ಅಲೆ ಹಿನ್ನೆಲೆ ಕೇರಳ ಮತ್ತು ಮಹಾರಾಷ್ಟ್ರದ ಗಡಿ ಪ್ರದೇಶಗಳಲ್ಲಿ ನಿರ್ಬಂಧ ವಿಧಿಸಲಾಗುವುದು ಎಂದು ಶನಿವಾರ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಕೇರಳ ಮತ್ತು ಮಹಾರಾಷ್ಟ್ರದೊಂದಿಗೆ ವ್ಯಾಪಾರ ಸಂಬಂಧವನ್ನು ಹೊಂದಿದ್ದೇವೆ. ಕೆಲವು ಗಡಿಗಳಲ್ಲಿ ಪ್ರತಿದಿನ ಪ್ರಯಾಣಿಕರು ಸಂಚಾರ ಮಾಡುತ್ತಾರೆ. ಗಡಿ ಜಿಲ್ಲೆಗಳಲ್ಲಿ ನಿರ್ಬಂಧ ಹೇರಲು ಉನ್ನತ ಮಟ್ಟದ ಚರ್ಚೆ ನಡೆಸಲಾಗಿದೆ. ಕೇರಳ ಮತ್ತು ಕರ್ನಾಟಕದ ನಡುವೆ ಪ್ರಯಾಣಿಸಲು 16 ಮಾರ್ಗಗಳಿವೆ. ನಾವು ಪ್ರಯಾಣಿಕರಿಗೆ ಕೆಲವು ಪ್ರಮುಖ ಮಾರ್ಗಗಳಲ್ಲಿ ಸಂಚಾರಕ್ಕೆ ಮಾತ್ರ ಅವಕಾಶ ನೀಡುತ್ತೇವೆ. ಇತರ ಮಾರ್ಗಗಳನ್ನು ಮುಚ್ಚುತ್ತೇವೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಪ್ರವೇಶಿಸುವ ಎಲ್ಲ ಜನರು ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳ ಗಡಿಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪಿಎಫ್ಐ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೆವೆ.‌ ಈಗಾಗಲೇ ಪ್ರಕರಣ ದಾಖಲಾಗಿದೆ. ಕಾರ್ಯಚರಣೆ , ವಿಚಾರಣೆ ಆಗುತ್ತೆ ಹಾಗೂ ತಪ್ಪಿತಸ್ತರಿಗೆ ಶಿಕ್ಷೆಯಾಗುತ್ತದೆ ಎಂದವರು ಹೇಳಿದರು‌.

ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಪಾದಯಾತ್ರೆಯಲ್ಲಿ ಇರುವವರು ನಮ್ಮ ಸಚಿವರ ಜೊತೆ ಸಂಪರ್ಕದಲ್ಲಿದ್ದಾರೆ. ಸಚಿವ ಸಿ ಸಿ ಪಾಟೀಲ್ ಜೊತೆ ಮಾತುಕತೆ ಮಾಡಿದ್ದಾರೆ.ಸಚಿವ ಸಂಪುಟದಲ್ಲಿ ವಿಸ್ತ್ರತ ಚರ್ಚೆ ಮಾಡಿದ್ದೇವೆ. ವಿವಿಧ ಸಮುದಾಯಗಳು ತಮ್ಮ ಬೇಡಿಕೆ ಇಟ್ಟಿದ್ದಾರೆ. ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ ಸೇರಿದಂತೆ ಜನರಲ್ ಎಲ್ಲಾ ಮೀಸಲಾತಿಗೂ ಹೋರಾಟ ನಡೆಯುತ್ತಿದೆ. ಸಮಸ್ಯೆ ಬಗೆಹರಿಸಲು ಸಮಗ್ರ ಚಿಂತನೆಯ ಅಗತ್ಯವಿದೆ. ಸಚಿವ ಸಂಪುಟದಲ್ಲಿ ಎಲ್ಲರ ಸಲಹೆಯನ್ನು ಪಡೆಯಲಾಗಿದೆ.ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯುತ್ತೇವೆ ಎಂದರು.

 

Comments are closed.