ಆರೋಗ್ಯ

ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದ ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr

ಹೊಸದಿಲ್ಲಿ: ವರ್ಷದಿಂದ ಹೆಮ್ಮಾರಿಯಾಗಿ ಕಾಡುತ್ತಿರುವ ಕೊರೋನಾ ಸೋಂಕಿನ ವಿರುದ್ದ ದೇಸಿಯ ಲಸಿಕೆ ನೀಡುವ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಕೋವಿಡ್ ಲಸಿಕೆಯ ದ್ವಿತೀಯ ಹಂತ ಇಂದಿನಿಂದ ಆರಂಭವಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಲಸಿಕೆ ಪಡೆದರು.

ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಲಸಿಕೆ ಪಡೆದರು. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು, ‘ಏಮ್ಸ್ ನಲ್ಲಿ ನಾನು ಮೊದಲ ಬಾರಿಗೆ ಕೋವಿಡ್-19 ಲಸಿಕೆಯನ್ನು ತೆಗೆದುಕೊಂಡಿದ್ದೇನೆ. ಕೋವಿಡ್ ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗಿದೆ. ಲಸಿಕೆಯನ್ನು ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡುತ್ತಿದ್ದೇನೆ. ಒಟ್ಟಾಗಿ, ಭಾರತವನ್ನು ಕೋವಿಡ್ ಮುಕ್ತವನ್ನಾಗಿ ಮಾಡೋಣ ಎಂದು ಟ್ವೀಟ್ ಮಾಡಿದ್ದಾರೆ.

ಕೊರೊನಾ ಲಸಿಕೆಯ ದ್ವಿತೀಯ ಹಂತ ಮಾ. 1ರಿಂದ ಆರಂಭವಾಗಲಿದ್ದು, 60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟು ಇತರೆ ರೋಗಗಳಿಂದ ಬಳಲುತ್ತಿರುವವರು ಈ‌ ಲಸಿಕೆ ಪಡೆಯಬಹುದು. ನೋಂದಣಿಗಾಗಿ ಕೊ-ವಿನ್‌ 2.0 ಪೋರ್ಟಲ್‌ ಮಾ.1ರ ಬೆಳಗ್ಗೆ 9ರಿಂದ ತೆರೆದುಕೊಳ್ಳಲಿದೆ.

Comments are closed.