ಆರೋಗ್ಯ

ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ ಘೋಷಣೆ

Pinterest LinkedIn Tumblr

ನವದೆಹಲಿ: ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಪಡೆಯಲು ಅವಕಾಶವಿದೆ ಎಂದು ಭಾರತ ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಸಿಕೆ ಬೆಲೆ ನಿಗದಿ, ಸಂಗ್ರಹಣೆ, ಅರ್ಹತೆ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಡ್ರೈವ್‌ನ 3ನೇ ಹಂತದ ಚಾಲನೆ ಸಿಕ್ಕಿದೆ.

ಲಸಿಕೆ ತಯಾರಕರು ತಮ್ಮ ಪೂರೈಕೆಯ ಶೇ. 50ರಷ್ಟನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಪೂರ್ವ ಘೋಷಿತ ಬೆಲೆಗೆ ಬಿಡುಗಡೆ ಮಾಡಲು ಅಧಿಕಾರ ನೀಡಲಾಗಿದೆ.

ಹೆಚ್ಚುವರಿ ಲಸಿಕೆ ಪ್ರಮಾಣವನ್ನು ನೇರವಾಗಿ ಉತ್ಪಾದಕರಿಂದ ಸಂಗ್ರಹಿಸಲು ರಾಜ್ಯಗಳಿಗೆ ಅಧಿಕಾರ ನೀಡಲಾಗಿದ್ದು ಜೊತೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ವರ್ಗದ ಜನರು ಲಸಿಕೆ ಪಡೆಯಬಹುದು ಎನ್ನಲಾಗಿದೆ.

Comments are closed.