ಆರೋಗ್ಯ

ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಕೊರೋನಾದಿಂದ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಬೆಂಗಳೂರು: ಭಾರತೀಯ ಬ್ಯಾಡ್ಮಿಂಟನ್ ಆಟಗಾರ, ನಟಿ ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ.

1980 ರಲ್ಲಿ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ‌.

ಕಳೆದ ಕೆಲವು ದಿನಗಳ ಹಿಂದೆ, ಪ್ರಕಾಶ್ ಮತ್ತವರ ಪತ್ನಿ ಉಜ್ಜಲಾ, ಎರಡನೇ ಮಗಳು ಅನಿಷಾ ಅವರಿಗೂ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತು. ಈ ಬಗ್ಗೆ ಪರೀಕ್ಷಿಸಿದಾಗ ಕೊರೋನಾ ರಿಪೋರ್ಟ್ ಕೂಡಾ ಪಾಸಿಟಿವ್ ಆಗಿದೆ ಎಂದು ಶಟ್ಲರ್ ಮತ್ತು ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿ (ಪಿಪಿಬಿಎ) ನಿರ್ದೇಶಕ ವಿಮಲ್ ಕುಮಾರ್ ತಿಳಿಸಿದ್ದಾರೆ.

“ಪ್ರಕಾಶ್ ಅವರು ಈಗ ಆರೋಗ್ಯದಿಂದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಕಾಶ ಅವರ ಹೆಂಡತಿ ಮತ್ತು ಮಗಳು ಮನೆಯಲ್ಲಿದ್ದು ಪ್ರಕಾಶ್ 2-3 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರು ಹೇಳಿದ್ದಾರೆ.

Comments are closed.