ಆರೋಗ್ಯ

ಕೊರೋನಾ ಹಿಮ್ಮೆಟ್ಟಿಸಲು ಸಂಪೂರ್ಣ ಲಾಕ್ ಡೌನ್ ಅಗತ್ಯವಿದೆ: ಸಂಸದೆ ಶೋಭಾ ಕರಂದ್ಲಾಜೆ

Pinterest LinkedIn Tumblr

ಉಡುಪಿ: ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಉಡುಪಿ ಜಿಲ್ಲೆಯಲ್ಲೂ ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.ಜನತಾ ಲಾಕ್ ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕಳೆದ ಬಾರಿಯಂತೆ ಗಂಭೀರವಾಗಿ ಕರ್ಪ್ಯೂ ಮಾಡಬೇಕು.ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು.ಉಳಿದಂತೆ ಪೂರ್ಣ ಲಾಕ್ಡೌನ್ ಮಾಡಬೇಕು. ಜನ ಈಗಿನಂತೆ ಓಡಾಡಿದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮದುವೆ, ದೇವಸ್ಥಾನ ಕಾರ್ಯಕ್ರಮ, ಭೂತಾರಾಧನೆ ಎಲ್ಲವೂ ನಡೆಯುತ್ತಿದೆ. ಜನ ಹೆಚ್ಚು ಬೆರೆಯುವುದರಿಂದ ರೋಗ ಹರಡುತ್ತದೆ. ಮುಂಬೈ ಬೆಂಗಳೂರಿನಿಂದಲೂ ಜನ ಜಿಲ್ಲೆಗೆ ಬರುತ್ತಿದ್ದಾರೆ. ಹೊರ ಜಿಲ್ಲೆಗಳಿಂದ ಬಂದವರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡಿಸಬೇಕು. ಇವತ್ತಿಂದ ರ್ಯಾಪಿಡ್ ಟೆಸ್ಟ್ ಆರಂಭಿಸಲು ಸೂಚನೆ ನೀಡಿದ್ದೇನೆ. ಹೋಂ ಕ್ಚಾರಂಟೈನ್ ಕಡ್ಡಾಯ ಮಾಡಬೇಕು. ಸ್ಥಿತಿಗತಿ ಗಮನಿಸಿದರೆ 15 ದಿನಗಳ ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದ್ದು ಜನರು ಮನೆಯಿಂದ ಹೊರಬಂದರೆ ಚೈನ್ ಲಿಂಕ್ ಕಟ್ ಮಾಡಲು ಅಸಾಧ್ಯ ಎಂದಿದ್ದಾರೆ.

Comments are closed.