ಆರೋಗ್ಯ

ಹೋಂ ಐಸೋಲೇಷನ್ ನಲ್ಲಿ ಇರುವವರಿಗೆ ಉಚಿತ ಆರೋಗ್ಯ ಕಿಟ್: ಸಚಿವ ಬೊಮ್ಮಾಯಿ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 2 ನೇ ಅಲೆಯನ್ನು ನಿಯಂತ್ರ‍್ರಿಸಲು , ಕೋವಿಡ್ ಸೋಂಕಿತರಾಗಿ ಹೋಂ ಐಸೋಲೇಷನ್ ನಲ್ಲಿ ಇರುವವರಿಗೆ ಕಡ್ಡಾಯವಾಗಿ ಉಚಿತ ಅಗತ್ಯ ಮಾತ್ರೆಗಳನ್ನು ಒಳಗೊಂಡ ಕಿಟ್‌ಗಳನ್ನು ನೀಡಿ ಎಂದು ಎಂದು ರಾಜ್ಯ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿ ಗತಿಯ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಹೋಂ ಐಸೋಲೇಶನ್ ನಲ್ಲಿರುವವರಿಗೆ ಉಚಿತವಾಗಿ ಅಗತ್ಯ ಮಾತ್ರೆಗಳನ್ನೊಳಗೊಂಡ ಕಿಟ್ ಗಳನ್ನು ಕಡ್ಡಾಯವಾಗಿ ನೀಡುವಂತೆ ಅದಿಕಾರಿಗಳಿಗೆ ಸೂಚಿಸಿದ ಸಚಿವರು, ಪ್ರತೀ ದಿನ ಹೋಂ ಐಸೋಲೇಷನ್ ನಲ್ಲಿ ಇರುವವರನ್ನು ಭೇಟಿ ಮಾಡಿ, ಅವರ ಆರೋಗ್ಯ ಪರಶೀಲನೆ ಕುರಿತು ವರದಿ ಪಡೆಯಿರಿ, ಇದರಿಂದ ರೋಗಿಗಳಿಗೆ ಆಕ್ಷಿಜಿನ್ ಪ್ರಮಾಣ ಕಡಿಮೆಯಿದ್ದಲ್ಲಿ , ಕೂಡಲೆ ಆಸ್ಪತ್ರೆಗಲಿಗೆ ದಾಖಲಿಸಲು ಸಾಧ್ಯವಾಗುತ್ತದೆ ಹಾಗೂ ಮರಣ ಸಂಭವಿಸುವುದನ್ನು ತಡೆಯಲು ಸಾಧ್ಯವಾಗಲಿದೆ ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಆಕ್ಸಿಜನ್ ಹೆಚ್ಚಳಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಬಹರೈನ್ ಮತ್ತು ಕುವೈತ್ ನಿಂದ ಬರುವ ಆಕ್ಸಜಿನ್ ನಲ್ಲಿ ಸಹ ಜಿಲ್ಲೆಗ ಸಾಕಷ್ಟು ಪ್ರಮಾಣದ ಆಕ್ಸಿಜಿನ್ ಸರಬರಾಜು ಮಾಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ, ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ 1500 ಎಲ್‌ಪಿಎಂ ನ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಸರ್ಕಾರದಿಂದ ಅನುಮತಿ ದೊರೆತಿದೆ. ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜಿನ್ ಸಂಗ್ರಹಿಸಲು ಸಿಲೆಂಡರ್ ಗಳ ಕೊರತೆಯಿದ್ದಲ್ಲಿ ಖಾಸಗಿಯವರಿಂದ ಲೀಸ್ ಆಧಾರದಲ್ಲಿ ಖಾಲಿ ಸಿಲೆಂಡರ್ ಗಳನ್ನು ಪಡೆಯಿರಿ ಆದರೆ ಆಕ್ಸಿಜಿನ್ ಅನಗತ್ಯ ಪೋಲಾಗದಂತೆ ಎಚ್ಚರವಹಿಸಿ ಎಂದು ಸೂಚನೆ ನೀಡಿದರು.

ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ ಪರೀಕ್ಷಾ ಕೇಂದ್ರ ಆರಂಭಿಸಲು ಸೂಚನೆ ನೀಡಲಾಗಿದೆ . ಜಿಲ್ಲೆಗೆ 480 ರೆಮಿಡಿಸಿವರ್ ಸರಬರಾಜು ಮಾಡಿದ್ದು, ಇನ್ನೂ ಹೆಚ್ಚುವರಿಯಾಗಿ 1000 ರೆಮಿಡಿಸಿವರ್ ಸರಬರಾಜು ಮಾಡುವಂತೆ ಸೂಚನೆ ನೀಡಲಾಗಿದೆ , ಜಿಲ್ಲೆಗೆ ಯಾವುದೇ ಅಗತ್ಯ ಔಷಧಗಳು ಮತ್ತು ಆಕ್ಸಿಜಿನ್ ಕೊರತೆಯಿದ್ದಲ್ಲಿ ಕನಿಷ್ಠ 2 ದಿನ ಮೊದಲೇ ತಮ್ಮ ಗಮನಕ್ಕೆ ತರುವಂತೆ ಸಚಿವರು ಸೂಚನೆ ನೀಡಿದರು.

ಈಗಾಗಲೇ ಜಿಲ್ಲ್ಲೆಯಲ್ಲಿ ಅರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರನ್ನು ದಾಖಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಸಚಿವರು, ಇದರಿಂದ ಕುಟುಂಬದ ಇತರರಿಗೆ ಸೋಂಕು ಹರಡುವುದನ್ನು ತಡೆಯುವದರ ಜೊತೆಗೆ , ತುರ್ತು ಸಂದರ್ಭದಲ್ಲಿ ಕೂಡಲೇ ಅಸ್ಪತ್ರೆಗೆ ದಾಖಲು ಮಾಡಲು ಹಾಗೂ ಸೂಕ್ತ ಚಿಕಿತ್ಸೆ ಒದಗಿಸಲು ಸಾಧ್ಯವಾಗಲಿದೆ ಎಂದರು.

ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಗಳ ಸಿಎಸ್‌ಆರ್ ನಿದಿಯಿಂದ ಅಗತ್ಯವಿರುವ ವೈದ್ಯಕೀಯ ನೆರವು ಪಡೆಯುವಂತೆ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕರ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ , ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್ , ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಸ್ಪಿ ವಿಷ್ಣುವರ್ಧನ್ , ಡಾ.ಸುಧೀರ್ ಚಂದ್ರ ಸೂಡಾ ಮತ್ತಿತರರು ಉಪಸ್ಥಿತರಿದ್ದರು.

Comments are closed.