ಆರೋಗ್ಯ

ಮಣಿಪಾಲ ಕೆ.ಎಂ.ಸಿ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ

Pinterest LinkedIn Tumblr

ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ 30,000 ಮುಖಗವಸುಗಳನ್ನು (ಮಾಸ್ಕ್) ನೀಡಲಾಯಿತು.

ಶುಕ್ರವಾರ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿಯವರು ಮಾಸ್ಕ್’ಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶರವರಿಗೆ ಹಸ್ತಾಂತರಿಸಿದರು.

ಮಣಿಪಾಲ ಸಂಸ್ಥೆಯು 2020ರ ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಡಾ. ಟಿಎಂಎಪೈ ಆಸ್ಪತ್ರೆ ಉಡುಪಿಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಮೀಸಲಾಗಿಡಲಾಗಿತ್ತು. ಈಗ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ಮಾಸ್ಕ್ ಅನ್ನು ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆಯು ಪರೀಕ್ಷಾ ದಿನದಂದು ವಿದ್ಯಾರ್ಥಿಗಳಿಗೆ ವಿತರಿಸಲಿದೆ. ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಇದರ ವಿತರಣೆಯ ಜವಾಬ್ದಾರಿ ವಹಿಸಿಕೊಳ್ಳಲಿದೆ.

ಮಾಸ್ಕ್ ವಿತರಣೆ ಸಂದರ್ಭದಲ್ಲಿ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್ ಎಚ್ ನಾಗೂರ, ಜಿಲ್ಲೆ, ಸ್ಕೌಟ್ಸ್ ಆಂಡ್ ಗೈಡ್ಸ್ ಇದರ ಜಿಲ್ಲಾ ಆಯುಕ್ತರಾದ ಡಾ. ವಿಜಯೇಂದ್ರ ರಾವ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.