ಆರೋಗ್ಯ

ಕೇರಳಾದಲ್ಲಿ ನಿಫಾ ವೈರಸ್ ಹೆಚ್ಚಳ: ರಾಜ್ಯದಲ್ಲೂ ಕಟ್ಟೆಚ್ಚರ: ಸಿಎಂ ಬಸವರಾಜ ಬೊಮ್ಮಾಯಿ

Pinterest LinkedIn Tumblr

ಬೆಂಗಳೂರು: ಕೇರಳ ರಾಜ್ಯದಲ್ಲಿ ನಿಫಾ ವೈರಸ್’ಗೆ ತುತ್ತಾಗಿ ಬಾಲಕ ಮೃತಪಟ್ಟಿದ್ದು ಅಲ್ಲಿ ನಿಫಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಇನ್ನಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕೊರೋನಾ ವೈರಸ್ ಹೆಚ್ಚಾದಾಗ ದಕ್ಷಿಣ ಕನ್ನಡ ಗಡಿಭಾಗವನ್ನು ಸೀಲ್ ಡೌನ್ ಮಾಡಿ ಲಸಿಕೆ ನೀಡುವುದು ಮತ್ತು ಕೊರೋನಾ ಪರೀಕ್ಷೆಯನ್ನು ಹೆಚ್ಚಳ ಮಾಡಿದ್ದೆವು. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಹಾಗೆಯೇ ನಿಫಾ ವೈರಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಜ್ಞರ ಬಳಿಕ ತಿಳಿದುಕೊಳ್ಳಲು ಹೇಳಿದ್ದು ಯಾವ ರೀತಿ ಹರಡುತ್ತದೆ, ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಲಹೆ ನೀಡುವಂತೆ ಸೂಚಿಸಿದ್ದೇನೆ. ನಿಫಾ ವೈರಸ್ ಬಗ್ಗೆ ಸರ್ಕಾರ ನಿಗಾ ವಹಿಸುತ್ತಿದ್ದು ನಿಯಂತ್ರಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆಯಿತ್ತರು.

ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್..
ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಕಂಡುಬಂದ ಹಿನ್ನೆಲೆಯಲ್ಲಿ ಗಡಿಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಗಡಿ ಭಾಗದಲ್ಲಿ ಸದ್ಯ ಪರಿಶೀಲನೆ ವ್ಯಾಪಕಗೊಳಿಸಲಾಗಿದೆ.

Comments are closed.