ಆರೋಗ್ಯ

ಭಾರತದಲ್ಲಿ ಕೊರೋನಾ ಏರಿಕೆ; ದೇಶದಲ್ಲಿಂದು 43,263 ಹೊಸ ಕೇಸ್ ಪತ್ತೆ, 338 ಮಂದಿ ಸಾವು

Pinterest LinkedIn Tumblr

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 43,263 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು 338 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,31,39,981ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,41,749ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,93,614ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 40,567 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,23,04,618ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 18,17,639 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 53,68,17,243 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 71,65,97,428 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Comments are closed.