ಆರೋಗ್ಯ

ಕೊರೋನಾದಿಂದ ಮೃತಪಟ್ಟ ಬಡತನರೇಖೆಗಿಂತ ಕೆಳಗಿರುವ ಕುಟುಂಬದವರು 1 ಲಕ್ಷ ನೆರವು ಪಡೆಯಲು ಇಲ್ಲಿದೆ ಮಾಹಿತಿ

Pinterest LinkedIn Tumblr

ಉಡುಪಿ: ಸರಕಾರದ ಆದೇಶದಂತೆ ಕೋವಿಡ್ -19 ವೈರಾಣು ಸೋಂಕಿನಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ರೂ. 1.00 ಲಕ್ಷಗಳ ಆರ್ಥಿಕ ನೆರವನ್ನು ನೀಡಲಾಗುವುದು. ವಿವರಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

(ಸಾಂದರ್ಭಿಕ ಚಿತ್ರ)

1) ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಸದಸ್ಯರು ಕೋವಿಡ್-19 ಸಾಂಕ್ರಾಮಿಕ ಸೋಂಕಿನಿಂದ ಮರಣ ಹೊಂದಿದ್ದರೂ ಸಹ ಒಬ್ಬ ಸದಸ್ಯರಿಗೆ ಮಾತ್ರ ರೂ.1.00 ಲಕ್ಷಗಳ ಪರಿಹಾರ ಪಾವತಿಸಲಾಗುತ್ತದೆ.

2) ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ ರೂ. 1.00 ಲಕ್ಷಗಳನ್ನು RTGS/NEFT ಮೂಲಕ ನೇರವಾಗಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

3) ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸುವಂತಹ ಎಲ್ಲಾ ಪ್ರಕ್ರಿಯೆಗಳನ್ನು ಅಂತರ್ಜಾಲದ ಮೂಲಕವೇ ನಿರ್ವಹಿಸಲಾಗುವುದು.

ಅರ್ಜಿದಾರರು ಪರಿಹಾರವನ್ನು ಪಡೆಯಲು ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ-1 ರಲ್ಲಿ ಮಾಹಿತಿ ಹಾಗೂ ನಮೂನೆ -2 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ಮತ್ತು ನಮೂನೆ -3 ರಲ್ಲಿ ನಿರಾಪೇಕ್ಷಣಾ ಪತ್ರವನ್ನು ಭರ್ತಿ ಮಾಡಿ ಈ ಕೆಳಕಂಡ ದಾಖಲಾತಿಗಳೊಂದಿಗೆ ತಾಲ್ಲೂಕು ಕಛೇರಿಗೆ ಸಲ್ಲಿಸುವುದು.

1) ಕೋವಿಡ್ -19 ವೈರಾಣು ಸೋಂಕಿನಿಂದ ಮೃತಪಟ್ಟಿದ್ದಕ್ಕೆ ಸಂಬಂಧಿಸಿದಂತೆ:
 ಕೋವಿಡ್ -19 ಪಾಸಿಟಿವ್ ರಿಪೋರ್ಟ್ (ಅಧಿಕೃತವಾಗಿ ಗುರುತಿಸಿದ ಪ್ರಯೋಗಾಲಯದಿಂದ ಪಡೆದಿರುವ)
 P Number (Patient Number) (ಕೋವಿಡ್ ದೃಢಪಟ್ಟ ರೋಗಿ ಸಂಖ್ಯೆ)
 ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು.

ಅಥವಾ

 ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಪಡೆದವರು (ಕೋವಿಡ್-19 ನೆಗೆಟಿವ್ ಇದ್ದವರು)
 ಕ್ಲೀನಿಕಲ್ ರೇಡಿಯಾಲಜಿ ಮತ್ತು ಇತರೆ ಸಂಬಂಧಿಸಿದ ಪ್ರಯೋಗಾಲಯ ವರದಿ
 P Number (Patient Number) (ರೋಗಿ ಸಂಖ್ಯೆ)
 ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು.

2) ಮೃತಪಟ್ಟವರ ಆಧಾರ್ ಕಾರ್ಡ್ ಪ್ರತಿ
3) ಮರಣ ಪ್ರಮಾಣ ಪತ್ರದ ಪ್ರತಿ
4) ಅರ್ಜಿದಾರರ ಪಡಿತರ ಚೀಟಿ ಪ್ರತಿ
5) ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ
6) ಬ್ಯಾಂಕ್ ಪಾಸ್ ಬುಕ್ ಪ್ರತಿ
7)ಅರ್ಜಿದಾರರಿಂದ ಸ್ವಯಂ ಘೋಷಣಾ ಪತ್ರ (ನಮೂನೆ -2)
8) ಕುಟುಂಬದ ಸದಸ್ಯರ ನಿರಾಪೇಕ್ಷಣಾ ಪತ್ರ (ನಮೂನೆ -3)

ಅರ್ಜಿ ನಮೂನೆಗಳನ್ನು ವೆಬ್ ಸೈಟ್ ವಿಳಾಸ www.udupi.nic.in ಮೂಲಕ ಹಾಗೂ ಸಂಬಂಧಿಸಿದ ತಾಲೂಕು ಕಛೇರಿಯಿಂದ ಪಡೆಯ ಬಹುದಾಗಿದೆ.

Comments are closed.