ಆರೋಗ್ಯ

2-18 ವರ್ಷದವರಿಗೂ ಕೋವ್ಯಾಕ್ಸಿನ್ ಲಸಿಕೆ ನೀಡಲು ಡಿಸಿಜಿಐಗೆ ತಜ್ಞರ ಸಮಿತಿ ಶಿಫಾರಸ್ಸು

Pinterest LinkedIn Tumblr

ನವದೆಹಲಿ: ಕೋರೋನಾಕ್ಕೆ ಮಕ್ಕಳಿಗೆ ನೀಡುವ ಕೋವಿಡ್ ಲಸಿಕೆ ಕುರಿತು ವಿಷಯ ತಜ್ಞರ ಸಮಿತಿ (ಎಸ್ಇಸಿ) ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಶಿಫಾರಸ್ಸು ಮಾಡಿದೆ. ಈ‌ ಮೂಲಕ ಮಕ್ಕಳಿಗೂ ಕೋವ್ಯಾಕ್ಸಿನ್ ಲಸಿಕೆ ನೀಡುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ.

ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಇಲ್ಲಿಯವರೆಗೂ ಮಕ್ಕಳಿಗೆ ಕೊರೋನಾ ಲಸಿಕೆ ಬಂದಿರಲಿಲ್ಲ. ಈ ನಿಟ್ಟಿನಲ್ಲಿ ಬಹುತೇಕ ಎಲ್ಲ ಔಷಧ ತಯಾರಿಕಾ ಸಂಸ್ಥೆಗಳು ಹಾಗೂ ಸ್ವತಃ ಕೇಂದ್ರ ಸರ್ಕಾರ ಸಾಕಷ್ಟು ತಲೆಕೆಡಿಸಿಕೊಂಡಿತ್ತು. ಅಲ್ಲದೆ ಮಕ್ಕಳ ಲಸಿಕೆಗಾಗಿ ಸತತ ಅಧ್ಯಯನ ನಡೆಸಿತ್ತು. ಇದೀಗಾ 2-18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಕೋವಿಡ್ ಲಸಿಕೆ ನೀಡುವಂತೆ ಎಸ್ ಇಸಿ ಸಂಸ್ಥೆ ಡಿಸಿಜಿಐಗೆ ಶಿಫಾರಸ್ಸು ಮಾಡಿದೆ.

ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡುವ ಕುರಿತು ವಿಷಯ ತಜ್ಞರ ಸಮಿತಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಶಿಫಾರಸ್ಸು ಮಾಡಿದೆ. ಈ ಶಿಫಾರಸ್ಸಿಗೆ ಮನ್ನಣೆ ನೀಡಿರುವ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ 2-18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಕೋವಿಡ್ ಲಸಿಕೆ ನೀಡಲು ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ. ಆದರೆ ಈ ಕುರಿತು ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಈ ಕುರಿತಂತೆ ವಿಷಯ ತಜ್ಞರ ಸಮಿತಿಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇದೆ.

 

Comments are closed.