ಆರೋಗ್ಯ

ವಿದೇಶದಿಂದ ಬಂದವರಿಗೆ ಒಂದು ವಾರ ಕಡ್ಡಾಯ ಕ್ವಾರಂಟೈನ್: ಕೇರಳದಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ- ಉಡುಪಿ ಡಿಸಿ

Pinterest LinkedIn Tumblr

ಉಡುಪಿ: ವಿದೇಶದಿಂದ ಬಂದವರ ಕೋವಿಡ್ ಆರ್‌.ಟಿ.ಪಿ.ಸಿ.ಆರ್‌ ವರದಿ ನೆಗೆಟಿವ್ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ.

ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ , ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ವಿದೇಶದಿಂದ ಬಂದವರು ಮೇಲೆ ನಿಗಾ ವಹಿಸಲಾಗಿದೆ. ಆರ್.ಟಿ.ಪಿ.ಸಿ.ಆರ್ ಟೆಸ್ಟ್ ನೆಗೆಟಿವ್ ವರದಿ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು. ಇದರೊಂದಿಗೆ ಕೇರಳದಿಂದ ಬಂದವರಿಗೂ ನೆಗೆಟಿವ್ ರಿಪೋರ್ಟ್ ಕಡ್ದಾಯವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ಮುಗಿಸಿ ಮತ್ತೆ ಟೆಸ್ಟಿಂಗ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಎಲ್ಲಾ ಸಮುದಾಯದ ಮುಖಂಡರು, ಸಂಘ ಸಂಘಟನೆಗಳ ಸಭೆ ಮಾಡಿದ್ದೇವೆ.ಮಾರ್ಗಸೂಚಿ ಪಾಲನೆ ಹಾಗೂ ವ್ಯಾಕ್ಸಿನೇಶನ್ ಬಗ್ಗೆ ಸಹಕಾರ ಕೇಳಿದ್ದೇವೆ. ಮೊದಲ ಡೋಸ್ ಪಡೆಯದವರ ಪತ್ತೆ ಕಾರ್ಯ ನಡೆಯುತ್ತಿದೆ. ಲಸಿಕೆ ಪಡೆಯಲು ನಿರಾಸಕ್ತಿ ತೋರುವವರನ್ನು ಸಂಬಂಧಪಟ್ಟ ಸಮುದಾಯಗಳ ಮುಖಂಡರು ಮನವೊಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಕಾಲೇಜು- ಹಾಸ್ಟೆಲ್ ಗಳ ಮೇಲೆ ಹೆಚ್ವಿನ ನಿಗಾ ವಹಿಸಲಾಗಿದೆ. ಮಣಿಪಾಲ ವಿವಿ ಜೊತೆ ಮಾತುಕತೆ ಮಾಡಿದ್ದೇವೆ. ಈ ಯೂನಿವರ್ಸಿಟಿ ಗೆ ಹೊರ ರಾಜ್ಯ ಹೊರ ದೇಶದಿಂದ ಹೆಚ್ಚಿನ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಹೀಗಾಗಿವಿದ್ಯಾರ್ಥಿಗಳಿಗೆ ಸಂಪೂರ್ಣ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಕಡ್ಡಾಯ ಮಾಡಲಾಗಿದೆ.ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಮಣಿಪಾಲ ವಿವಿ ಮುಖ್ಯಸ್ಥರು ಹೇಳಿದ್ದಾರೆ ಎಂದು ಡಿಸಿ ತಿಳಿಸಿದ್ದಾರೆ.

Comments are closed.