ಆರೋಗ್ಯ

ಓಮಿಕ್ರಾನ್ ಸೋಂಕು ಪ್ರಸರಣ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಘೋಷಣೆ; ವಿವರ ಹೀಗಿದೆ…

Pinterest LinkedIn Tumblr

ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬಂದವರ ಪೈಕಿ ಇಬ್ಬರಿಗೆ ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ಡಿ.3 ಶುಕ್ರವಾರ ಒಂದಷ್ಟು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಕೊರೋನಾ ತಡೆಗೆ ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಕಂದಾಯ ಸಚಿವ ಆರ್ ಅಶೋಕ್ ಅವರು ರಾಜ್ಯದಲ್ಲಿ ಮತ್ತೆ ಕೋವಿಡ್ ಕಂಟ್ರೋಲ್ ರೂಂ ಸ್ಥಾಪಿಸಲಾಗುತ್ತದೆ. ಮಾಲ್, ಥಿಯೇಟರ್ ಗೆ ತೆರಳುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡಿದಿರಬೇಕೆಂಬ ನಿಯಮ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಮದುವೆ ಸಮಾರಂಭಗಳಿಗೂ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದ್ದು, 500 ಮಂದಿ ಮಾತ್ರ ಸೇರಬೇಕು ಎಂದು ಆದೇಶಿಸದ್ದಾರೆ.

ಶಾಲಾ ಕಾಲೇಜುಗಳಲ್ಲಿ ಕೊರೋನಾ ಹೆಚ್ಚು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳಿಸುವ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಬೋಧಕ ಸಿಬ್ಬಂದಿಗಳಿಗೆ 2 ಡೊಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ ಹಾಗೂ 2022 ರ ಜನವರಿ 15 ವರೆಗೂ ಶಾಲಾ ಕಾಲೇಜುಗಳಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.

ಕೋವಿಡ್-19 ಹೊಸ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರತಿನಿತ್ಯ 1 ಲಕ್ಷ ಕೋವಿಡ್-19 ಟೆಸ್ಟ್ ಮಾಡಲು ಸರ್ಕಾರ ಆದೇಶ ನೀಡಿದೆ.

ವಿಮಾನ ನಿಲ್ದಾಣದಲ್ಲಿ ಪ್ರತಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಪರೀಕ್ಷೆ ವರದಿ ಬಂದ ನಂತರವೇ ಪ್ರಯಾಣಿಕರನ್ನು ಹೊರಗೆ ಬಿಡಲಾಗುವುದು.

 

 

 

Comments are closed.