ಆರೋಗ್ಯ

ಜಿಲ್ಲೆಯಲ್ಲಿ ಕೋವಿಡ್-19 ಹೆಚ್ಚುವರಿ ನಿಯಂತ್ರಣ ಕ್ರಮ ಜಾರಿ; ಆದೇಶ ಪಾಲಿಸದಿದ್ದರೆ ಕಠಿಣ ಕ್ರಮ: ಉಡುಪಿ ಡಿಸಿ ಕೂರ್ಮಾರಾವ್ ಎಂ.

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ, ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ಮತ್ತು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕೊರೋನಾ ಮಾರ್ಗಸೂಚಿಯ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಮುಂದಿನ ಆದೇಶದ ವರೆಗೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.

????????????????????????????????????

ಎಲ್ಲಾ ಸಭೆ, ಸಮಾರಂಭ, ಸಮ್ಮೇಳನ ಇತ್ಯಾದಿಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 500 ಜನರಿಗೆ ಸೀಮಿತಗೊಳಿಸಲಾಗಿದ್ದು, ಇಂತಹ ಸಂದರ್ಭಗಳಲ್ಲಿ ಕೊವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದು ಸಂಘಟಕರ ಹಾಗೂ ವ್ಯವಸ್ಥಾಪಕರ ಜವಾಬ್ದಾರಿಯಾಗಿರುತ್ತದೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಸುವ ಸಾಂಸ್ಕೃತಿಕ ಚಟುವಟಿಕೆ, ಹಬ್ಬ ಮತ್ತು ಸಮಾರಂಭಗಳನ್ನು 2022 ಜನವರಿ 15 ರ ವರೆಗೆ ಮುಂದೂಡಬೇಕು. ಶಾಲೆ, ಕಾಲೇಜುಗಳಿಗೆ ತೆರಳುವ 18 ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ -19 ಲಸಿಕೆಯನ್ನು ಪಡೆದಿರಬೇಕು. ಎರಡು ಡೋಸ್ ಕೊರೋನಾ ಲಸಿಕೆ ಪಡೆದಿರುವ ವ್ಯಕ್ತಿಗಳಿಗೆ ಮಾತ್ರ ಮಾಲ್, ಚಿತ್ರ ಮಂದಿರಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡಬೇಕು.

ಈ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆಕ್ಟ್ 2005, ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆಕ್ಟ್ 2020 ಮತ್ತು ಐ.ಪಿ.ಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ.

Comments are closed.