ಆರೋಗ್ಯ

ನಟ ಅರ್ಜುನ್ ಸರ್ಜಾಗೆ ಕೊವಿಡ್​ ಪಾಸಿಟಿವ್​ ದೃಢ; ಅಭಿಮಾನಿಗಳಿಗೆ ಜಾಗೃತಿ ಹೇಳಿದ ಸರ್ಜಾ..!

Pinterest LinkedIn Tumblr

ಚೆನ್ನೈ: ನಟ ಅರ್ಜುನ್ ಸರ್ಜಾ ಅವರಿಗೂ ಕೋವಿಡ್​ ಪಾಸಿಟಿವ್​ ಬಂದಿದೆ. ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಆರೋಗ್ಯ ಸ್ಥಿತಿ ಹೇಗಿದೆ ಎಂಬುದನ್ನು ಅವರು ತಿಳಿಸಿದ ಅವರು ಅಭಿಮಾನಿಗಳಲ್ಲೂ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

ರಿಯಾಲಿಟಿ ಶೋವೊಂದಕ್ಕೆ ಅರ್ಜುನ್ ಸರ್ಜಾ ನಿರೂಪಕನಾಗಿದ್ದರು. ಅದರ ಫಿನಾಲೆ ಕಾರ್ಯಕ್ರಮ ಇತ್ತೀಚೆಗಷ್ಟೇ ನಡೆದಿತ್ತು. ಅದರ ಚಿತ್ರೀಕರಣ ಮುಗಿದ ಬಳಿಕ ಅವರಿಗೆ ಕೊವಿಡ್​ ಪರೀಕ್ಷೆ ಮಾಡಿಸಲಾಗಿದ್ದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮ್ಮ ಜತೆ ಇತ್ತೀಚಿನ ದಿನಗಳಲ್ಲಿ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅರ್ಜುನ್​ ಸರ್ಜಾ ಮಾಹಿತಿ ನೀಡಿದ್ದಾರೆ.

‘ಎಲ್ಲರಿಗೂ ಹಾಯ್​, ನನಗೆ ಕೊವಿಡ್​ ಪಾಸಿಟಿವ್​ ದೃಢವಾಗಿದೆ. ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್​ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಾನು ಈಗ ಚೆನ್ನಾಗಿದ್ದೇನೆ. ನೀವೆಲ್ಲರೂ ಸುರಕ್ಷಿತವಾಗಿರಿ. ಮಾಸ್ಕ್​ ಧರಿಸುವುದನ್ನು ಮರೆಯಬೇಡಿ. ರಾಮ ಭಕ್ತ ಹನುಮಾನ್​ ಕಿ ಜೈ’ ಎಂದು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅರ್ಜುನ್​ ಸರ್ಜಾ ಬರೆದುಕೊಂಡಿದ್ದಾರೆ.

ಅರ್ಜುನ್​ ಸರ್ಜಾ ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

Comments are closed.