ಆರೋಗ್ಯ

ಉಡುಪಿಯಲ್ಲಿ 2, ಭದ್ರಾವತಿ, ಧಾರವಾಡದಲ್ಲಿ ತಲಾ 1 ಓಮಿಕ್ರಾನ್ ಪ್ರಕರಣ; ದ.ಕದಲ್ಲಿ 6 ಕ್ಕೇರಿಕೆ

Pinterest LinkedIn Tumblr

ಬೆಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೆ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ|ಕೆ .ಸುಧಾಕರ್ ಅವಿಭಜಿತ ಜಿಲ್ಲೆ ಹಾಗೂ ಧಾರವಾಡ, ಭದ್ರಾವತಿ ಓಮಿಕ್ರಾನ್ ಪ್ರಕರಣ ಪತ್ತೆಯಾಗಿರುವುದನ್ನು ದೃಢಪಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಪತ್ತೆಯಾಗಿದ್ದು 82 ವರ್ಷದ ವೃದ್ಧ ಹಾಗೂ 73 ವರ್ಷದ ವೃದ್ಧೆಗೆ ಸೋಂಕು ದೃಢಪಟ್ಟಿದೆ. ಹಾಗೆಯೇ ಮಂಗಳೂರಿನ ನರ್ಸಿಂಗ್ ಕಾಲೇಜಿನ 19 ವರ್ಷದ ಯುವತಿಗೆ ದೃಢಪಟ್ಟಿದೆ. ಧಾರವಾಡದಲ್ಲಿ 54 ವರ್ಷದ ಪುರುಷ ಹಾಗೂ ಭದ್ರಾವತಿಯಲ್ಲಿ 20 ವರ್ಷದ ಯುವತಿಯಲ್ಲಿ ಸೋಂಕು ಪತ್ತೆಯಾಗಿದೆ.

ಉಡುಪಿಯ ಪ್ರಕರಣದಲ್ಲಿ ಕುಟುಂಬದಲ್ಲಿ ಕೊವಿಡ್ ಪಾಸಿಟಿವ್ ಪತ್ತೆಯಾದ ಹಿನ್ನಲೆಯಲ್ಲಿ ಪ್ರಾಥಮಿಕ ಸಂಪರ್ಕಿತರಾದ ಕಾರಣ ಕುಟುಂಬದ 4 ಮಂದಿ ಸದಸ್ಯರು ಕೊವೀಡ್ ಪರೀಕ್ಷೆಗೆ ಒಳಪಟ್ಟಿದ್ದರು. ಒಂದೇ ಕುಟುಂಬದ ಮೂವರಿಗೆ ಕೊವಿಡ್ ಪಾಸಿಟಿವ್ ಪತ್ತೆಯಾಗಿದ್ದು ಡಬ್ಲ್ಯೂಜಿಎಸ್ ಪರೀಕ್ಷೆ ಯಲ್ಲಿ ಇಬ್ಬರಿಗೆ ಓಮಿಕ್ರಾನ್ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸೋಂಕು ಹರಡಿದ ಮೂಲ ಸಂಪರ್ಕಿತರನ್ನು ಆರೋಗ್ಯ ಇಲಾಖೆ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದೆ. ಇಬ್ಬರಲ್ಲೂ ಯಾವುದೇ ಕೊವಿಡ್ ರೋಗ ಲಕ್ಷಣ ಕಂಡುಬಂದಿಲ್ಲ.

ಶನಿವಾರ ದಕ್ಷಿಣ ಕನ್ನಡದಲ್ಲಿ ಎರಡು ಕ್ಲಸ್ಟರ್ ಗಳಲ್ಲಿ ಐವರು ವಿದ್ಯಾರ್ಥಿಗಳಿಗೆ ಓಮಿಕ್ರಾನ್ ಸೋಂಕು ದೃಢಪಡುವ ಮೂಲಕ ಜಿಲ್ಲೆಯಲ್ಲಿ ಮೊದಲ ಕೇಸ್ ಪತ್ತೆಯಾಗಿತ್ತು. ಮಂಗಳೂರಿನ ಹೊರವಲಯದ ಮುಡಿಪು ಸಮೀಪ ಇರುವ ವಸತಿ ನಿಲಯದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಮತ್ತು ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಸೇರಿದಂತೆ ಒಟ್ಟು ಐವರಲ್ಲಿ ಓಮಿಕ್ರಾನ್ ಸೋಂಕು ಕಂಡುಬಂದಿತ್ತು.

ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

Comments are closed.