ಮಂಗಳೂರು: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಮೂರ್ಜೆ(32) ಅವರ ಅಂಗಾಂಗವನ್ನು ದಾನ ಮಾಡಲಾಗಿದೆ.
ಸತೀಶ್ ಅವರ ಕುಟುಂಬಸ್ಥರು ಹೃದಯ, ಲಿವರ್, ಕಿಡ್ನಿ ದಾನಕ್ಕೆ ನಿರ್ಧಾರ ಮಾಡಿದ್ದು, ಇಂದು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಹೃದಯವನ್ನು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ, ಲಿವರ್ ಬೆಂಗಳೂರಿನ ನಾರಾಯಣ್ ಹೃದಯಕ್ಕೆ ರವಾನೆ ಮಾಡಲಾಗಿದ್ದು, ಒಂದು ಕಿಡ್ನಿ ಉಡುಪಿ ಮಣಿಪಾಲ ಆಸ್ಪತ್ರೆಗೆ, ಒಂದು ಕಿಡ್ನಿ ಮಂಗಳೂರಿನ ಕೆಎಸ್ ಹೆಗ್ಡೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇನ್ನು ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ರವಾನೆ ಮಾಡಲಾಗಿದ್ದು, ಮಂಗಳೂರು ಪೊಲೀಸರು ಝೀರೊ ಟ್ರಾಫಿಕ್ ವ್ಯವಸ್ಥೆ ಮೂಲಕ ಆ್ಯಂಬುಲೆನ್ಸ್ ನಲ್ಲಿ ಅಂಗಾಂಗ ಸಾಗಿಸಲು ವ್ಯವಸ್ಥೆ ಮಾಡಿದ್ದಾರೆ.
ಪುಂಜಾಲಕಟ್ಟೆ ಬಳಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಸತೀಶ್ ಅವರು ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ವೈದ್ಯರು ಅವರ ಮೆದುಳು ನಿಷ್ಕ್ರಿಯಗೊಂಡ ಬಗ್ಗೆ ನಿನ್ನೆ ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸತೀಶ್ ಅವರ ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ.
Comments are closed.