ಆರೋಗ್ಯ

ರಾಜ್ಯದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ಪಾಸಿಟಿವ್ ದೃಢ

Pinterest LinkedIn Tumblr

ಬೆಂಗಳೂರು: ರಾಜ್ಯದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಕೋವಿಡ್ ನ ಸಣ್ಣ ಪುಟ್ಟ ಲಕ್ಷಣಗಳು ಕಂಡು ಬಂದಿದೆ ಎಂದು ಅವರು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದೆ. ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಇದೀಗ ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ಅದೇ ರೀತಿ ನನ್ನ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಗೆ ಒಳಗಾಗಲು ಸೂಚಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ಅಲ್ಲದೆ, ರಾಜ್ಯದ ಜನತೆ ಕೂಡ ಸೋಂಕಿನ ಕುರಿತಂತೆ ಎಚ್ಚರ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

Comments are closed.