ಆರೋಗ್ಯ

ರಾಜ್ಯದಲ್ಲಿ 2 ಸಾವಿರದ ಗಡಿ ದಾಟಿದ ಕೊರೋನಾ ಸೋಂಕಿನ ಪ್ರಕರಣ: ಬೆಂಗಳೂರಿನಲ್ಲಿ 2,053 ಪಾಸಿಟಿವ್ ಕೇಸ್..!

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 2,479 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿರುವುದನ್ನು ಆರೋಗ್ಯ ಸಚಿವ ಡಾ.ಸುಧಾಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರು ಒಂದರಲ್ಲೇ 2,053 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ದರ ಶೇ.2.59 ಕ್ಕೆ ಏರಿಕೆಯಾಗಿದ್ದು, ಕೋವಿಡ್-19 ನಿಂದ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 38,355ಕ್ಕೆ ಏರಿಕೆಯಾಗಿದೆ. ಇನ್ನು ಇಂದು 288 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ವರೆಗೂ 2961410 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕು ಹೆಚ್ಚಳವಾಗಿರುವ ಪರಿಣಾಮ ಸಕ್ರಿಯ ಪ್ರಕರಣಗಳ ಸಂಖ್ಯೆ 13532 ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಜುಲೈ 29 ರಂದು ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 2 ಸಾವಿರದ ಗಡಿಯನ್ನು ದಾಟಿತ್ತು.

ಇಂದು ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಹೊಸದಾಗಿ ಪತ್ತೆಯಾಗಿಲ್ಲ. ರಾಜ್ಯಾದ್ಯಂತ ಕೋವಿಡ್-19 ಸೋಂಕು ಹೆಚ್ಚು ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ಕಠಿಣ ನಿರ್ಬಂಧಗಳು ಜಾರಿಗೊಳ್ಳುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ಕೊರೋನಾ ಹೆಚ್ಚಳವಾಗುತ್ತಿರುವ ಪ್ರದೇಶಗಳಲ್ಲಿ ಸೋಂಕು ತಡೆಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ನಿರ್ಧರಿಸಲು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಆರೋಗ್ಯ ಸಚಿವರು, ಹಿರಿಯ ಕ್ಯಾಬಿನೆಟ್ ಸಹೋದ್ಯೋಗಿಗಳು ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಸಭೆ ನಡೆಯುತ್ತಿದೆ.

Comments are closed.