ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ನಿತ್ಯವೂ ಗಣನೀಯ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಶನಿವಾರದಂದು ಬೆಂಗಳೂರಿನಲ್ಲಿ 7,113 ಮಂದಿಗೆ ಸೋಂಕು ದೃಢಪಟ್ಟಿರುವುದು ಸೇರಿ ರಾಜ್ಯಾದ್ಯಂತ 8,906 ಪ್ರಕರಣಗಳು ವರದಿಯಾಗಿದ್ದು 24 ಗಂಟೆಗಳಲ್ಲಿ ನಾಲ್ವರು ಮಂದಿ ಸಾವನ್ನಪ್ಪಿದ್ದಾರೆ.
ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಈ ಬಗ್ಗೆ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.5.42 ರಷ್ಟಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಇಂದು 508 ಮಂದಿ ಡಿಸ್ಚಾರ್ಜ್ ಆಗಿದ್ದು ರಾಜ್ಯದಲ್ಲಿ 38,507 ಸಕ್ರಿಯ ಪ್ರಕರಣಗಳಿದ್ದರೆ, ಬೆಂಗಳೂರು ಒಂದರಲ್ಲೇ 32 ಸಾವಿರ ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.
ಇನ್ನು ಕೊರೋನಾ ಸೋಂಕಿನಿಂದ ಬೆಂಗಳೂರಿನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇಂದು ರಾಜ್ಯಾದ್ಯಂತ ಒಟ್ಟು 1,64,261 ಸೋಂಕು ಪತ್ತೆ ಪರೀಕ್ಷೆ ನಡೆದಿದೆ.
Comments are closed.