ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಭೀತಿಯ ನಡುವೆಯೇ 60 ವರ್ಷ ದಾಟಿದ ಅನಾರೋಗ್ಯ ಪೀಡಿತರು, ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮುಂಜಾಗ್ರತಾ ಡೋಸ್ (ಬೂಸ್ಟರ್ ಡೋಸ್) ಲಸಿಕಾ ಅಭಿಯಾನಕ್ಕೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಬೂಸ್ಟರ್ ಡೋಸ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಆರೋಗ್ಯ ಸಚಿವ ಡಾ|| ಕೆ.ಸುಧಾಕರ್, ಬಿ.ಬಿ.ಎಂ.ಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
Comments are closed.