ಆರೋಗ್ಯ

ಈ ಐದು ರಾಜ್ಯಗಳ ಕೋವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಚಿತ್ರ ಇರುವುದಿಲ್ಲ; ಕಾರಣವೇನು..?

Pinterest LinkedIn Tumblr

ನವದೆಹಲಿ: ಐದು ರಾಜ್ಯಗಳಲ್ಲಿ ನೀಡಲಿರುವ ಕೋವಿಡ್ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಇರುವುದಿಲ್ಲ. ಅದಕ್ಕೆ ಕಾರಣವಿದೆ. ಶೀಘ್ರದಲ್ಲೇ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು ಈ ಹಿನ್ನೆಲೆ ಫೋಟೋ ಇರಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನಸಭೆಗಳಿಗೆ ಶನಿವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸುವುದರೊಂದಿಗೆ ಜಾರಿಗೆ ಬಂದಿರುವ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಕೋವಿನ್ ಆ್ಯಪ್‌ನಲ್ಲಿ ಈ ಸಂಬಂಧ ಬದಲಾವಣೆಗಳನ್ನು ಮಾಡಲಿದೆ ಎಂದು ಅವರು ವಿವರಿಸಿದ್ದಾರೆ. 2021ರ ಮಾರ್ಚ್‌ನಲ್ಲಿ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಆರೋಗ್ಯ ಸಚಿವಾಲಯ ಇದೇ ರೀತಿಯ ಕ್ರಮ ಕೈಗೊಂಡಿತ್ತು.

Comments are closed.