ಆರೋಗ್ಯ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್

Pinterest LinkedIn Tumblr

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ 19 ಸೋಂಕು ತಗಲಿರುವುದು ದೃಢವಾಗಿದೆ.

ಸೋಂಕು ದೃಢವಾದ ಬಗ್ಗೆ ಸ್ವತಃ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ಖಚಿತಪಡಿಸಿದ್ದು, ಯಾವುದೇ ರೋಗಲಕ್ಷಣಗಳಿಲ್ಲ ಎಂದಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಹಿಂದೆಯೂ ಕೋವಿಡ್ ಸೋಂಕು ತಗುಲಿತ್ತು. ಇದೀಗ ಎರಡನೇ ಬಾರಿ ಸೋಂಕು ದೃಢವಾಗಿದೆ.

ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

Comments are closed.