ಆರೋಗ್ಯ

ಏನಿದು ಬೂಸ್ಟರ್ ಡೋಸ್..?; ಯಾರೆಲ್ಲಾ ಪಡೆಯಬಹುದು- ಇಲ್ಲಿದೆ ಮಾಹಿತಿ

Pinterest LinkedIn Tumblr

ನವದೆಹಲಿ: ಕೋವಿಡ್ 19 ರೂಪಾಂತರಿ ತಳಿ ಓಮಿಕ್ರಾನ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಬೂಸ್ಟರ್ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು. ಮೊದಲ ಮತ್ತು ಎರಡನೇ ಡೋಸ್‌ ಲಸಿಕೆ ಹಾಕಿಸಿಕೊಂಡವರು ಅದೇ ಲಸಿಕೆ ಹಾಕಿಸಿಕೊಳ್ಳಬೇಕು. ಇದರಲ್ಲಿ ಮಿಕ್ಸ್ ಅಂಡ್ ಮ್ಯಾಚ್ ಇರುವುದಿಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಮುನ್ನೆಚ್ಚರಿಕೆಯ ಲಸಿಕೆ ಡೋಸ್‌ಗಳಿಗೆ ತೆಗೆದುಕೊಳ್ಳುವವರು ಮುಂಚಿತವಾಗಿ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲ. ಅರ್ಹರು ನೇರವಾಗಿ ಲಸಿಕೆ ಹಾಕಿಸಿಕೊಳ್ಳಲು ಸಮಯ ನಿಗದಿಪಡಿಸಿಕೊಳ್ಳಬಹುದು ಅಥವಾ ನೇರವಾಗಿ ಯಾವುದೇ ಲಸಿಕೆ ಕೇಂದ್ರಕ್ಕೆ ಹೋಗಬಹುದು. ಪ್ರಸ್ತುತ ಮುಂಚೂಣಿ ಕಾರ್ಯಕರ್ತರು, ಹಿರಿಯರಿಗೆ ಮಾತ್ರ ಬೂಸ್ಟರ್ ಲಸಿಕೆ ನೀಡಲು ನಿರ್ಧರಿಸಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವವರು, ಪೊಲೀಸ್ ಸೇರಿದಂತೆ ಇನ್ನಿತರ ಮುಂಚೂಣಿ ಕಾರ್ಯಕರ್ತರು, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಇತರ ದೀರ್ಘಕಾಲದ ಕಾಯಿಲೆಗಳಂತಹ ಸಹ ಅಸ್ವಸ್ಥತೆಗಳನ್ನು ಹೊಂದಿರುವ 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ವೈದ್ಯರ ಸಲಹೆಯ ಮೇರೆಗೆ ಮುನ್ನೆಚ್ಚರಿಕೆ ಡೋಸ್ ಅನ್ನು ಪಡೆಯಬಹುದು.

ಬೂಸ್ಟರ್ ಲಸಿಕೆಗಳನ್ನು ತೆಗೆದುಕೊಳ್ಳಲು ಅರ್ಹರಾಗಿರುವವರು, ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ 9 ತಿಂಗಳ ನಂತರ ಮಾತ್ರ ಪಡೆಯಬಹುದು. ಮೊದಲ ಮತ್ತು ಎರಡನೇ ಡೋಸ್‌ ನಲ್ಲಿ ಸ್ವೀಕರಿಸಿದ ಲಸಿಕೆಯನ್ನೇ ಮೂರನೇ ಡೋಸ್ ನಲ್ಲಿಯೂ ಪಡೆಯಬೇಕು.

ಮೊದಲ ಮತ್ತು ಎರಡನೇ ಡೋಸ್‌ ನಲ್ಲಿ  ಸ್ವೀಕರಿಸಿದ ಲಸಿಕೆಯನ್ನೇ ಮೂರನೇ ಡೋಸ್ ನಲ್ಲಿಯೂ ಪಡೆಯಬೇಕು. ಕೋವಿಶಿಲ್ಡ್ ತೆಗೆದುಕೊಂಡಿದ್ದವರು ಮತ್ತೆ ಕೋವಿಶಿಲ್ಡ್ ಅನ್ನೇ ತೆಗೆದುಕೊಳ್ಳಬೇಕು. ಕೋ ವ್ಯಾಕ್ಸಿನ್ ತೆಗೆದುಕೊಂಡಿದ್ದವರು ಬೂಸ್ಟರ್ ಡೋಸ್ ಆಗಿ ಅದನ್ನೇ ತೆಗೆದುಕೊಳ್ಳಬೇಕು. ಇದರಲ್ಲಿ ಯಾವುದೇ  ಮಿಕ್ಸ್ ಅಂಡ್ ಮ್ಯಾಚ್ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

 

Comments are closed.