ಆರೋಗ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೊರೋನಾ ಪಾಸಿಟಿವ್

Pinterest LinkedIn Tumblr

ಬೆಂಗಳೂರು: ಕೊರೋನಾ ಮೂರನೇ ಅಲೆ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ರಾಜ್ಯದಲ್ಲಿ 60 ವರ್ಷ ದಾಟಿದ ಅನಾರೋಗ್ಯ ಪೀಡಿತರು, ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮುಂಜಾಗ್ರತಾ ಡೋಸ್(ಬೂಸ್ಟರ್ ಡೋಸ್) ಲಸಿಕಾ ಅಭಿಯಾನಕ್ಕೆ ನೀಡಿದ್ದು ಈ ನಡುವೆಯೇ ಸಿಎಂ ಬೊಮ್ಮಾಯಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ ಅವರು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸಿಎಂ ಇಂದು ಬೆಳಗ್ಗೆ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು, ಸಂಜೆ ಪಾಸಿಟಿವ್ ಎಂದು ಕೊವಿಡ್ ರಿಪೋರ್ಟ್ ಬಂದಿದೆ.

ಸಿಎಂ ಬೊಮ್ಮಾಯಿ ಅವರು ಕೋವಿಡ್ ಬೂಸ್ಟರ್ ಡೋಸ್ ಲಸಿಕೆಗೆ ಚಾಲನೆ ನೀಡಿದ ನಂತರ ಇಂದು ನಿಧನರಾದ ಹಿರಿಯ ಸಾಹಿತಿ ಪ್ರೋ. ಚಂದ್ರಶೇಖರ ಪಾಟೀಲ ಅವರ ಅಂತಿಮ ದರ್ಶನ ಪಡೆದಿದ್ದರು. ಅಲ್ಲದೆ ಆಡಳಿತ ಸುಧಾರಣಾ ಸಭೆಯಲ್ಲೂ ಕೂಡ ಭಾಗಿಯಾಗಿದ್ದರು.

 

Comments are closed.