ಆರೋಗ್ಯ

ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್

Pinterest LinkedIn Tumblr

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಬೆನ್ನಲ್ಲೆ ಇದೀಗ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೂ ಕೋವಿಡ್-19 ದೃಢಪಟ್ಟಿದೆ.

ಈ ಕುರಿತಂತೆ ಭರತ್ ಬೊಮ್ಮಾಯಿ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೇವಲ ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಇದೀಗ ಮನೆಯಲ್ಲಿಯೇ ಐಸೋಲೇಷನ್‍ನಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಸೋಮವಾರ ಬಸವರಾಜ ಬೊಮ್ಮಾಯಿ ಅವರು ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿರುವಂತೆ ತಿಳಿಸಿದ್ದರು.

Comments are closed.