ಆರೋಗ್ಯ

ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದಾಗಿಲ್ಲ; ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದೆ: ಡಿಸಿ ಕೂರ್ಮಾರಾವ್

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ರದ್ದು ಮಾಡಿ ಡಿಸಿ ಆದೇಶ ಮಾಡಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗುತ್ತಿದೆ. ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯೂ ಈ ಹಿಂದಿನ ಆದೇಶದಂತೆ ಜಾರಿಯಲ್ಲಿರುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಸ್ಪಷ್ಟಪಡಿಸಿದರು.

ಕೋವಿಡ್ -19 ರೂಪಾಂತರಿ ಒಮಿಕ್ರಾನ್ ವೈರಾಣುವಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜ4ರಂದು ಹೊರಡಿಸಿರುವ ಸರ್ಕಾರದ ಆದೇಶ ಸಂ.ಕಂಇ 158.ಟಿ.ಎನ್.ಆರ್ 2020 ರಂತೆ ಹಾಗೂ ಜ.5 ರಂದು ಜಿಲ್ಲಾಡಳಿತದಿಂದ ಹೊರಡಿಸಿರುವ ಆದೇಶದನ್ವಯ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ದಿನಾಂಕ: 05.01.2022 ರ ಅಪರಾಹ್ನ 10.00 ರಿಂದ ದಿನಾಂಕ: 19.01.2022 ರ ಪೂರ್ವಾಹ್ನ 5.00 ರ ವರೆಗೆ ಕಟ್ಟು ನಿಟ್ಟಾಗಿ ಜಾರಿಯಲ್ಲಿರಲಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾಧಿಕಾರಿಯವರು ಉಡುಪಿ ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂವನ್ನು ರದ್ದುಪಡಿಸಿರುತ್ತಾರೆಂದು ವಿಡಿಯೋ ತುಣುಕನ್ನು ಹರಿಯಬಿಟ್ಟಿರುವುದು, ಜನರಲ್ಲಿ ಗೊಂದಲ ಸೃಷ್ಟಿ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.

ಇದು ಒಂದು ಸುಳ್ಳು ವದಂತಿಯಾಗಿದ್ದು, ಜಿಲ್ಲೆಯಲ್ಲಿ ಸರಕಾರದ ಆದೇಶದಂತೆ ದಿನಾಂಕ: 05.01.2022 ರ ಅಪರಾಹ್ನ 10.00 ರಿಂದ ದಿನಾಂಕ: 19.01.2022 ರ ಪೂರ್ವಾಹ್ನ 5.00 ರ ವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಹಾಗೂ ವಾರಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.

Comments are closed.