ಆರೋಗ್ಯ

ದೇಶದಲ್ಲಿ ಮತ್ತೆ ಕೊರೋನಾ ಸ್ಫೋಟ; 24 ಗಂಟೆಯಲ್ಲಿ 1,94,720 ಕೋವಿಡ್ ಪ್ರಕರಣ ಪತ್ತೆ; 442 ಮಂದಿ ಸಾವು

Pinterest LinkedIn Tumblr

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆ ಪ್ರಮಾಣದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಜ.12 ಬುಧವಾರ ಬಿಡುಗಡೆಗೊಳಿಸಿರುವ ಅಂಕಿ‌ ಅಂಶದಲ್ಲಿ ತಿಳಿಸಿದೆ.

ದೇಶದಲ್ಲಿ ಒಂದೇ ದಿನದಲ್ಲಿ 1,94,720 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದ್ದು, 442 ಮಂದಿ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ. ಸತತ ನಾಲ್ಕು ದಿನಗಳಿಂದ ಭಾರತದಲ್ಲಿ 1. 5ಲಕ್ಷಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದೆ.

ಭಾರತದಲ್ಲಿ ಪಾಸಿಟಿವಿಟಿ ದರ ಶೇ.11.5ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 9,55,319ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 4,868ಕ್ಕೆ ಹೆಚ್ಚಳವಾಗಿದೆ. ಇದರಲ್ಲಿ 1805 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ ಎಂದು ವರದಿ ತಿಳಿಸಿದೆ.

28 ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 1,281 ಪ್ರಕರಣ, ರಾಜಸ್ಥಾನ್ 645, ದೆಹಲಿ 546, ಕರ್ನಾಟಕ 479 ಹಾಗೂ ಕೇರಳದಲ್ಲಿ 350 ಪ್ರಕರಣ ವರದಿಯಾಗಿದೆ.

 

Comments are closed.