ಆರೋಗ್ಯ

ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ: ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

Pinterest LinkedIn Tumblr

ನವದೆಹಲಿ: ಭಾರತದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಜ.13ಗುರುವಾರ) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕೂಡ ನಿತ್ಯ ಕೊರೋನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳ ಈ ಸಭೆ ಮಹತ್ವದ್ದಾಗಿದೆ.

ರಾಜ್ಯದಲ್ಲಿ ಫೆಬ್ರವರಿ ತಿಂಗಳಿನಲ್ಲಿ ಗರಿಷ್ಠ ಪ್ರಮಾಣಕ್ಕೆ ಸೋಂಕು ತಲುಪಲಿದ್ದು, ಕೊರೋನಾ 3ನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ನಡೆಸುತ್ತಿರುವ ಈ ಸಭೆ ಮಹತ್ವವನ್ನು ಪಡೆದುಕೊಂಡಿದೆ.

ಆಸ್ಪತ್ರೆಗಳ ಸಿದ್ಧತೆ, ಕೊವೀಡ್ ಆಸ್ಪತ್ರೆಗಳ ಪುನಾರಂಭ, ಐಸಿಯು, ಆಕ್ಸಿಜನ್ ಬೆಡ್, ಆಕ್ಸಿಜನ್ ಲಭ್ಯತೆ, ಔಷಧಿಗಳ ಲಭ್ಯತೆ, ಮಕ್ಕಳಿಗಾಗಿ ಮಾಡಿಕೊಂಡ ವಿಶೇಷ ತಯಾರಿಗಳು, ಕೇಂದ್ರ ತಾಂತ್ರಿಕ ನೆರವಿನ ಅವಶ್ಯಕತೆ ಕೇಳಬಹುದು. ಸೋಂಕು ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಸಭೆ ಬಳಿಕ ಲಾಕ್‍ಡೌನ್ ಹೆಸರು ಹೇಳದೇ ಸರ್ಕಾರ ಕಠಿಣ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆಯಿದೆ. ಪ್ರಧಾನಿ ಮೋದಿ ಸಲಹೆ ಸೂಚನೆಗಳನ್ನ ಆಧರಿಸಿ, ಬಳಿಕ ತಜ್ಞರ ವರದಿಯನ್ನು ಪಡೆದುಕೊಂಡು ಸರ್ಕಾರ ಕಠಿಣ ಕ್ರಮಕೈಗೊಳ್ಳುವ ಸಾಧ್ಯತೆಗಳಿವೆ.

Comments are closed.