ಆರೋಗ್ಯ

ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಅವರಿಗೆ ಕೋವಿಡ್-19 ಸೋಂಕು ದೃಢ

Pinterest LinkedIn Tumblr

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನಾಯಕ ವೀರಪ್ಪ ಮೊಯಿಲಿ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಈ ಬಗ್ಗೆ ವೀರಪ್ಪ ಮೊಯಿಲಿ ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

‘ಇಂದು ಸಂಜೆ ನನಗೆ ಕೋವಿಡ್ ಸೋಂಕು ದೃಢವಾಗಿದೆ. ಕೆಮ್ಮು ಮತ್ತು ಜ್ವರದ ರೋಗಲಕ್ಷಣಗಳನ್ನು ಹೊಂದಿದ್ದೇನೆ. ನಾನು ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿದ್ದರಿಂದ ಹೆಚ್ಚು ತೀವ್ರವಾದ ಅನಾರೋಗ್ಯದಿಂದ ನನ್ನನ್ನು ರಕ್ಷಿಸುತ್ತಿದೆ. ನಾನು ಸದ್ಯ ಹೋಮ್ ಕ್ವಾರಂಟೈನ್‌ ನಲ್ಲಿದ್ದೇನೆ ಮತ್ತು ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರನ್ನು ಪರೀಕ್ಷಿಸಲು ವಿನಂತಿಸುತ್ತೇನೆ’ ಎಂದು ವೀರಪ್ಪ ಮೊಯಿಲಿ ಬುಧವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.

ವೀರಪ್ಪ ಮೊಯಿಲಿ ಅವರು ಮೇಕೆದಾಟು ಪಾದಯಾತ್ರೆಯ ಮೊದಲ ದಿನ ಭಾಗವಹಿಸಿದ್ದರು. ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ನಾಯಕರ ಪೈಕಿ ಕೋವಿಡ್ ಸೋಂಕಿಗೊಳಗಾದವರ ಸಂಖ್ಯೆ ನಾಲ್ಕಕ್ಕೇರಿದೆ.

Comments are closed.