ಆರೋಗ್ಯ

ಜ್ವರದ ಲಕ್ಷಣವಿದ್ದ ಹಿನ್ನೆಲೆ ಪರೀಕ್ಷೆ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಪಾಸಿಟಿವ್

Pinterest LinkedIn Tumblr

ಉಡುಪಿ: ಜ್ವರದ ಹಿನ್ನೆಲೆ ವೈದ್ಯಕೀಯ ಪರೀಕ್ಷೆ ನಡೆಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮೂಲಗಳ ಪ್ರಕಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ‘ ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡುತ್ತೇನೆ’ ಎಂದಿದ್ದಾರೆ.

ಇನ್ನು ಕೋಟ ಶ್ರೀನಿವಾಸ ಪೂಜಾರಿಯವರಿಗೆ ಎರಡನೇ ಅಲೆಯಲ್ಲೂ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಚಿಕಿತ್ಸೆ ಪಡೆದಿದ್ದರು‌.

Comments are closed.