ಆರೋಗ್ಯ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಕೊರೋನಾ ಸೋಂಕು ದೃಢ

Pinterest LinkedIn Tumblr

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಹೆಚ್. ​ಡಿ ದೇವೇಗೌಡರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವೇಗೌಡರು, ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಈ ಹಿಂದೆ ಕೊರೋನಾ ಎರಡನೇ ಅಲೆಯಲ್ಲೂ ದೇವೇಗೌಡ ದಂಪತಿಗೆ ಕೊರೋನಾ ಸೋಂಕು ತಗುಲಿತ್ತು. ಸದ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನೆಲೆ ಕೊರೋನಾ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

Comments are closed.