ಆರೋಗ್ಯ

ರಸ್ತೆ ಅಪಘಾತದ ಗಾಯಾಳು ಸಾವು; ಮಗನ ಅಂಗಾಂಗ ದಾನ ಮಾಡಿದ ಪೋಷಕರು; 6 ಮಂದಿಗೆ ಪ್ರಯೋಜನ

Pinterest LinkedIn Tumblr

ಉಡುಪಿ: ಇತ್ತೀಚೆಗೆ ಬ್ರಹ್ಮಾವರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಯುವಕನ ಅಂಗಾಂಗ ದಾನದಿಂದ 6 ಮಂದಿ ಪ್ರಯೋಜನ ಪಡೆದುಕೊಂಡಿದ್ದಾರೆ.

ಸಾಲಿಗ್ರಾಮದ ನಿವಾಸಿ ಶ್ರೀನಿವಾಸ (19) ಎಂಬವರು ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಬಳಿ ಎ. 2ರಂದು ಸಂಜೆ ವೇಳೆ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ರಕ್ಷಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ.

ಶ್ರೀನಿವಾಸ್‌ ಅವರ ತಂದೆ ರಾಜು ನಾಯರಿ ಅವರು ಕಾರ್ಯ ಸಾಧ್ಯವಾದ ಅಂಗಗಳನ್ನು ದಾನ ಮಾಡಲು ಇಚ್ಛೆ ವ್ಯಕ್ತಪಡಿಸಿದರು. ಅದರಂತೆ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳು 6 ಜನರಿಹೆ ಸಹಾಯವಾಯಿತು.

ನೋಂದಾಯಿತ ರೋಗಿಗಳಿಗೆ ಎರಡು ಕಾರ್ನಿಯಾಗಳು ಮತ್ತು ಎರಡು ಮೂತ್ರಪಿಂಡ ಮತ್ತು ಚರ್ಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಳಸಲಾಯಿತು. ಯಕೃತ್ತನ್ನು ಬೆಂಗಳೂರಿನ ಆಸ್ಟರ್‌ ಆಸ್ಪತ್ರೆಗೆ ನೀಡಲಾಯಿತು.

ಅಂಗದಾನ ಪುಣ್ಯದ ಕೆಲಸ. ನಮ್ಮ ಮಗ ಅಂಗದಾನ ಮಾಡಿ ಸಾರ್ಥಕ್ಯ ಮೆರೆದಿದ್ದಾನೆ ಎಂದು ಶ್ರೀನಿವಾಸ್‌ ಅವರ ತಂದೆ ರಾಜು ನಾಯರಿ ಹೇಳಿದ್ದಾರೆ.

ಅಂಗದಾನ ಶ್ರೇಷ್ಠ ಕಾರ್ಯ. ಜನರು ಈ ರೀತಿಯ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು ಎಂದು ಮಣಿಪಾಲ ಕೆ.ಎಂ.ಸಿ ವೈದ್ಯಕೀಯ ಅಧೀಕ್ಷಕರಾದ ಡಾ| ಅವಿನಾಶ ಶೆಟ್ಟಿ ತಿಳಿಸಿದ್ದಾರೆ.

Comments are closed.