ಆರೋಗ್ಯ

ಮುದೂರು ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮ: ಸಚಿವ ಎಸ್. ಅಂಗಾರ

Pinterest LinkedIn Tumblr

ಕುಂದಾಪುರ: ಮುದೂರು ಮತ್ತು ಜಡ್ಕಲ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ನಿಯಂತ್ರಿಸಲು ಅಗತ್ಯ ವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೂಚನೆ ನೀಡಿದರು.

ಅವರು ಸೋಮವಾರ ಕೊಲ್ಲೂರು ವ್ಯಾಪ್ತಿಯ ಮುದೂರು ಮತ್ತು ಜಡ್ಕಲ್‌ನ ಡೆಂಗ್ಯೂ ಪೀಡಿತ ಮನೆಗಳಿಗೆ ಭೇಟಿ ನೀಡಿ ಮಾತನಾಡಿದರು.

ಆಶಾ-ಆರೋಗ್ಯ ಕಾರ್ಯಕರ್ತರು ಪ್ರತೀ ಮನೆಗೆ ಭೇಟಿ ನೀಡಿ, ಸ್ವಚ್ಛತೆ ಕಾಪಾಡುವ ಮತ್ತು ನೀರು ಶೇಖರ ವಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಬೇಕು. ಸೊಳ್ಳೆ ಪರದೆ ಮತ್ತು ಡಿಎಂಪಿ ತೈಲವನ್ನು ನೀಡುವಂತೆ, ನಿರಂತರ ಫಾಗಿಂಗ್ ಮಾಡುವಂತೆ ಸೂಚಿಸಿದರು.

ಇಲ್ಲಿ ಜನವರಿಯಿಂದ ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, 113 ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ 47 ಸಕ್ರಿಯ ಪ್ರಕರಣಗಳಿವೆ. ಚಿಕಿತ್ಸೆಗಾಗಿ ಕುಂದಾಪುರ ತಾ, ಆಸ್ಪತ್ರೆಯಲ್ಲಿ ಒಟ್ಟು 60 ಬೆಡ್‌ಗಳ ವಿಶೇಷ ವಾರ್ಡ್‌ ತೆರೆಯಲಾಗಿದೆ.

ಶಾಸಕ ಸುಕುಮಾರ ಶೆಟ್ಟಿ, ಬೈಂದೂರು ಬ್ಲಾಕ್ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಡ್ಕಲ್ ಗ್ರಾ.ಪಂ. ಅಧ್ಯಕ್ಷ , ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಷ ಲಕ್ಷ್ಮಣ , ತಹಸೀಲ್ದಾರ್ ಶೋಬಾಲಕ್ಷ್ಮೀ, ಅಧಿಕಾರಿಗಳಾದ ಡಾ| ಚಿದಾನಂದ ಸಂಜು, ಡಾ| ರಾಜೇಶ್ವರಿ ಉಪಸ್ಥಿತರಿದ್ದರು.

Comments are closed.