ಆರೋಗ್ಯ

ಭಾರತದಲ್ಲಿ ಮತ್ತೆ ಮಹಾಮಾರಿ ಕೊರೋನಾ ಏರಿಕೆ: ದೇಶದಲ್ಲಿಂದು 4,270 ಹೊಸ ಕೇಸ್ ಪತ್ತೆ, 15 ಮಂದಿ ಸಾವು

Pinterest LinkedIn Tumblr

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದೆ. ದೇಶದಲ್ಲಿ ಭಾನುವಾರ ಬೆಳಿಗ್ಗೆನವರೆಗೆ (24 ಗಂಟೆ ಅವಧಿಯಲ್ಲಿ) 4,270 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.

(ಸಾಂದರ್ಭಿಕ ಚಿತ್ರ)

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,76,817ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,692ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 24,052ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,619 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,28,073ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,45,814 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,22,09,788 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,94,09,46,157 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Comments are closed.