ಆರೋಗ್ಯ

ಬೆಂಗಳೂರಿನಲ್ಲಿ ಶುಕ್ರವಾರ 610 ಸೇರಿದಂತೆ ರಾಜ್ಯದಲ್ಲಿ 634 ಮಂದಿಗೆ ಕೊರೋನಾ ಪಾಸಿಟಿವ್; ಇಬ್ಬರು ಸಾವು

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆ ಅವಧಿಯಲ್ಲಿ 634 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,59,458ಕ್ಕೆ ಏರಿಕೆಯಾಗಿದೆ.

(ಸಾಂದರ್ಭಿಕ ಚಿತ್ರ)

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಶುಕ್ರವಾರ ಇಬ್ಬರು ಮೃತಪಟ್ಟಿದ್ದು. ಇದರೊಂದಿಗೆ ಸಾವಿನ ಸಂಖ್ಯೆ 40070 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಶುಕ್ರವಾರ 610 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,94,738ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಶುಕ್ರವಾರ 503 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,14,846ಕ್ಕೆ ಏರಿಕೆಯಾಗಿದೆ. ಇನ್ನು 4500 ಸಕ್ರಿಯ ಪ್ರಕರಣಗಳಿವೆ.

 

Comments are closed.