ಆರೋಗ್ಯ

ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ‘ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಅತ್ಯುತ್ತಮ ನಿರ್ವಹಣಾ ಪ್ರಶಸ್ತಿ’

Pinterest LinkedIn Tumblr

ಕುಂದಾಪುರ: ರಾಜ್ಯದಲ್ಲಿ ಆಯುಷ್ಮಾನ್‌ ಭಾರತ್‌ ಕರ್ನಾಟಕ (ಎಬಿಪಿಎಂಜೆಎವೈ-ಎಆರ್‌ಕೆ) ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳ ಅತ್ಯುತ್ತಮ ಕಾರ್ಯಕ್ಷಮತೆಯ ವಿವರ ಮತ್ತು ಯೋಜನೆಯ ಬಳಕೆಯಲ್ಲಿ ಅತ್ಯುತ್ತಮ ನಿರ್ವಹಣೆ ಸಾಧಿಸಿರುವುದನ್ನು ಪರಿಗಣಿಸಿ ‘ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ’ಗೆ ‘ಆಯುಷ್ಮಾನ್‌ ಅತ್ಯುತ್ತಮ ನಿರ್ವಹಣ ಪ್ರಶಸ್ತಿ’ ಲಭಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉಡುಪಿಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ಹಸ್ತಾಂತರಿಸಿದ್ದು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾll ರೋಬರ್ಟ್ ರೆಬೆಲ್ಲೋ ಪ್ರಮಾಣಪತ್ರ ಸ್ವೀಕರಿಸಿದರು.

*ಕುಂದಾಪುರದ ಸರಕಾರಿ ಆಸ್ಪತ್ರೆಗೆ ಮತ್ತೊಂದು ಪ್ರಶಸ್ತಿ*
ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯು ಈ ಹಿಂದೆ ಪ್ರತಿಷ್ಠಿತ ‘ಕಾಯಕಲ್ಪ ಪ್ರಶಸ್ತಿ’ ಮುಡಿಗೇರಿಸಿಕೊಂಡಿದ್ದು, ಇತ್ತೀಚೆಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೊಡ ಮಾಡುವ ಪ್ರತಿಷ್ಠಿತ ‘ಲಕ್ಷ್ಯ ಪ್ರಶಸ್ತಿ’ಗೆ ಭಾಜನವಾಗಿತ್ತು. ಪ್ರಸ್ತುತ ಸ್ವಾತಂತ್ರ್ಯದ ಸಂಭ್ರಮದಲ್ಲಿ ಇನ್ನೊಂದು ಪ್ರಶಸ್ತಿ ಪಡೆಯುವ ಮೂಲಕ ಸರಕಾರಿ ಆಸ್ಪತ್ರೆ ಜನಮನ್ನಣೆಗೆ ಪಾತ್ರವಾಗಿದೆ.

ಉಡುಪಿ ಶಾಸಕ ಯಶ್‌ಪಾಲ್‌ ಎ. ಸುವರ್ಣ, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿ.ಪಂ. ಸಿಇಒ ಪ್ರಸನ್ನ ಎಚ್‌., ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚೀಂದ್ರ, ಜಿಲ್ಲಾ ಆರೋಗ್ಯಾಧಿಕಾರಿ ಎಚ್‌. ನಾಗಭೂಷಣ ಉಡುಪ ಉಪಸ್ಥಿತರಿದ್ದರು.

Comments are closed.