ಆರೋಗ್ಯ

ನಾಳೆ (ಫೆ.10) ಆರೋಗ್ಯ ಸಚಿವರಿಂದ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವಾಕ್ ಶ್ರವಣ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

Pinterest LinkedIn Tumblr

ಕುಂದಾಪುರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಇಲ್ಲಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ (AIISH) ಮೈಸೂರು ಇದರ ಔಟ್‌ರೀಚ್‌ ಸರ್ವೀಸ್‌ ಸೆಂಟ‌ರ್ (ಓ.ಎಸ್.ಸಿ) ನೂತನ ಕಟ್ಟಡ ಹಾಗೂ ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆ ಫೆ.10 ಶನಿವಾರ ಕುಂದಾಪುರ ಸಾರ್ವಜನಿಕ ಆಸ್ಪತ್ರೆ ವಠಾರದಲ್ಲಿ ನಡೆಯಲಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಉದ್ಘಾಟಿಸಲಿದ್ದಾರೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉಪಸ್ಥಿತರಿರಲಿದ್ದು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಸಹಿತ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪುರಸಭೆ ಸದಸ್ಯರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಆಸ್ಪತ್ರೆಯಲ್ಲಿ ಸುದೀರ್ಘ‌ ಅವಧಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಅಗಲಿರುವ ದಿ| ವಿಜಯಾ ಬಾಯಿ ಅವರ ಹೆಸರಿನಲ್ಲಿ ಅವರ ಪತಿ, ಪುರಸಭೆ ಮಾಜಿ ಸದಸ್ಯ ಶಿವರಾಮ ಪುತ್ರನ್‌, ಮಕ್ಕಳು ಮತ್ತು ಕುಟುಂಬಿಕರು ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌ ಸೆಂಟರ್ ಕಟ್ಟಡ ಕೊಡುಗೆಯಾಗಿ ನೀಡಿದ್ದು ಅವರನ್ನು ಹಾಗೂ ದಾನಿಗಳಾದ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ಅಧ್ಯಕ್ಷ ಸುರೇಶ್ ಮಲ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಜಯಕರ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಕುಂದಾಪುರ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕ ಡಾ. ರೊಬರ್ಟ್ ರೆಬೆಲ್ಲೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.